Slider

ಉಡುಪಿ: ಅಂಗನವಾಡಿ ನೌಕರರಿಂದ ಅಹೋರಾತ್ರಿ ಧರಣಿ

Udupi


ಉಡುಪಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯವನ್ನು ರೂಪಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಮಂಗಳವಾರದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲಿದೆ.
CLICK HERE SHOP NOW

ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಿ, ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ನೀಡಿ ರುವ ಭರವಸೆಯಂತೆ ವೇತನವನ್ನು 15,000ರೂ.ಗಳಿಗೆ ಏರಿಸಿ, ಗ್ರಾಜ್ಯುಟಿ ಅನುದಾನದ ಬಿಡುಗಡೆ ಹಾಗೂ ಬಜೆಟ್‌ನಲ್ಲಿ ಅನುದಾನ ಏರಿಕೆಗೆ ಆಗ್ರಹಿಸಿ ಈ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಯಲಿದೆ. 

ಈಗ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಏಕಕಾಲದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಉಡುಪಿಯಲ್ಲೂ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘದ ಸುಶೀಲಾ ನಾಡ ತಿಳಿಸಿದ್ದಾರೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo