ಬೆಂಗಳೂರು: ಕುಟುಂಬ ರಾಜಕಾರಣ ವಿರುದ್ಧ ಬಹಿರಂಗವಾಗಿಯೇ ಕಿಡಿ ಕಾರಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಸೋಮವಾರ ಶಾಕ್ ನೀಡಿದೆ. ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಯತ್ನಾಳ್ ಅವರಿಗೆ ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅದಕ್ಕೀಗ ಯತ್ನಾಳ್ ಅವರು ಪ್ರತಿಕ್ರಿಯಿಸಿದ್ದಾರೆ.
CLICK HERE SHOP NOW
ಸಾಮಾಜಿಕ ಜಾಲತಾಣದಲ್ಲಿ ಶೋಕಾಸ್ ನೋಟಿಸ್ ಸಮೇತ ಪೋಸ್ಟ್ ಮಾಡಿರುವ ಅವರು, ಶೀಘ್ರದಲ್ಲೇ ನೋಟಿಸ್‌ಗೆ ಉತ್ತರ ಕೊಡುವೆ ಎಂದಿದ್ದಾರೆ. ''ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ ಎಂದು ಬಹಿರಂಗವಾಗಿ ಗುಡುಗಿದ್ದಾರೆ.
ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ಹೇಳುವ ಮೂಲಕ ಇದ್ಯಾವುದಕ್ಕೆ ಜಗ್ಗುವುದಿಲ್ಲ. ನನ್ನ ಹೋರಾಟ ಜನಪರ ಎಂಬ ಸಂದೇಶ ರವಾನಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ