Slider

ಉಡುಪಿ: ಸಿಇಐಆರ್ ಪೊರ್ಟಲ್ ಮೂಲಕ ಪತ್ತೆ ಹಚ್ಚಲಾದ 18 ಮೊಬೈಲ್‌ ಗಳನ್ನು ವಾರೀಸುದಾರರಿಗೆ ಹಸ್ತಾಂತರ

Udupi

 


ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಲ್ಲಿ ಸಿಇಐಆರ್ ಪೊರ್ಟಲ್ ಮೂಲಕ ಪತ್ತೆ ಹಚ್ಚಲಾದ 18 ಮೊಬೈಲ್‌ ಗಳನ್ನು ಇಂದು ವಾರೀಸುದಾರರಿಗೆ ಹಸ್ತಾಂತರಿಸಲಾಯಿತು

ಉಡುಪಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಠಾಣೆಯಲ್ಲಿ ವಾರಿಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್ ಹಾಗೂ ಪೊಲೀಸ್ ಉಪನಿರೀಕ್ಷಕರು ಗಳಾದ ಪುನೀತ್ ಕುಮಾರ್ ಬಿ.ಈ., ಈರಣ್ಣ, ಶಿರಗುಂಪಿ, ಭರತೇಶ್ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ, ಪತ್ತೆಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಠಾಣಾ ಗಣಕಯಂತ್ರ ಸಿಬ್ಬಂದಿ ವಿನಯ ಕುಮಾರ ಉಪಸ್ಥಿತರಿದ್ದರು.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಾಣೆಯಾದ ದೂರುಗಳು ಸ್ವೀಕರಿಸಿದ್ದು, ನಂತರ ಆ ಮೊಬೈಲ್ ಗಳನ್ನು ಭಾರತ ಸರ್ಕಾರ ಜಾರಿಗೆ ತಂದಿರುವ ಸಿಇಐಆರ್ ಪೋರ್ಟಲ್ ಆಪ್ಲಿಕೇಷನ್ ಅಡಿಯಲ್ಲಿ ಬ್ಲಾಕ್ ಮಾಡಲಾಗಿತ್ತು. ಹೀಗೆ 2024ನೇ ಸಾಲಿನಲ್ಲಿ ಈ ಪೋರ್ಟಲ್ ಮೂಲಕ ಒಟ್ಟು 98 ಮೊಬೈಲ್‌ಗಳನ್ನು ಪತ್ತೆಹಚ್ಚಿ, ಸುಮಾರು 85 ಮೊಬೈಲ್‌ಗಳನ್ನು ಈಗಾಗಲೇ ವಾರೀಸುದಾರರಿಗೆ ಹಸ್ತಾಂತರಿಸಲಾಗಿದೆ. ಇವುಗಳ ಒಟ್ಟು ಮೌಲ್ಯ 13.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.”

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo