ಉಡುಪಿ:ಸಿಟಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವರುಣ್(20) ನೀರೆ ಎಂಬಾತನು ಸಿಟಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಸಿರುವಂತೆ ಕಂಡು ಬಂದ ಹಿನ್ನೆಲೆಯಲ್ಲಿ ಮೆಡಿಕಲ್ ತಪಾಸಣೆ ಗೊಳಪಡಿಸಿ, ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಬಂದಿರುವ ತಜ್ಞ ವರದಿಯನ್ನು ಸ್ವೀಕರಿಸಿ, ವರದಿಯಲ್ಲಿ ಆರೋಪಿಯು ಈತನು ಗಾಂಜಾ ಸೇವನೆ ಮಾಡಿರುವುದು ಧೃಢ ಪಟ್ಟಿರುತ್ತದೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ