Slider

ಅಜ್ಜರಕಾಡು: ಜಿಲ್ಲಾಸ್ಪತ್ರೆಯ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

Udupi


ಉಡುಪಿ : ಅಜ್ಜರಕಾಡುವಿನಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾಸ್ಪತ್ರೆಯ ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮೂಡುಬೆಳ್ಳೆ ಗ್ರಾಮದ ಸಂತೋಷ್(46) ಎಂದು ಗುರುತಿಸ ಲಾಗಿದೆ. ಇವರು ನಿರ್ಮಾಣ ಹಂತದಲ್ಲಿರುವ ಸರಕಾರಿ ಆಸ್ಪತ್ರೆಗೆ ವಾಟರ್ ಪ್ರೂಫಿಂಗ್ ಕೆಲಸಕ್ಕೆ ಹೋಗಿದ್ದು, ಕಟ್ಟಡದ ಆರನೇ ಅಂತಸ್ಥಿನ ಮೇಲಿರುವ ಟ್ಯಾಂಕಿಗೆ ವಾಟರ್ ಪ್ರೂಫಿಂಗ್ ಮಾಡಲು ತೆರಳಿದ್ದರು.

CLICK HERE SHOP NOW

ಕೆಲಸವನ್ನು ಮುಗಿಸಿ ವಾಪಸ್ಸು ಕೆಳಗಡೆ ಬರಲು 6ನೇ ಅಂತಸ್ಥಿನ ಮೇಲೆ ಅಳವಡಿ ಸಿದ ಪಾಲಿ ಕಾರ್ಮರ್ ಶೀಟ್‌ನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಅವುಗಳ ಮಧ್ಯ ಅಳವಡಿಸಿದ ಶೀಟ್ ಒಂದರ ಮೇಲೆ ಕಾಲು ಇಟ್ಟರು. 

ಇದರಿಂದ ಸಂತೋಷ್ ಆಯತಪ್ಪಿ6ನೇ ಅಂತಸ್ಥಿನ ಮೇಲ್ಚಾವಣಿನಿಂದ ನೇರ ನೇಲಕ್ಕೆ ಅಂಗಾತ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo