ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಂಬಂಧ ಬೆಳಗಾವಿಯ ಸುವರ್ಣಸೌಧದ ಎದುರುಗಡೆ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಯತ್ನಾಳ್ ಹಾಗೂ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇನ್ನು ಪೊಲೀಸರು ಲಾಠಿಚಾರ್ಜ್ ಮಾಡಿರುವುದರಿಂದ ಸಿಡಿದೆದ್ದಿರುವ ಹೋರಾಟಗಾರರ ಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಅಡ್ಡಲಾಗಿ ಮಲಗಿ ರಸ್ತೆ ತಡೆ ನಡೆಸಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 6 ಕಿಲೋ ಮೀಟರ್ ನಷ್ಟು ವಾಹನಗಳು ಸಾಲುಗಟ್ಟಿ ನಿಂತಿವೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ