Slider

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳು..!


ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, 3 ಹಸುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.

ಚಾಮರಾಜಪೇಟೆಯ ವಿನಾಯಕನಗರದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ .ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದ ಕಿಡಿಗೇಡಿಗಳ ಕೃತ್ಯಕ್ಕೆ ಜನರು ಹಿಡಿಶಾಪ ಹಾಕಿದ್ದು, ಆರೋಪಿಗಳನ್ನು ಹಿಡಿದು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸಂಕ್ರಮಣದ ಸಂದರ್ಭದಲ್ಲಿ ಹಸುಗಳನ್ನು, ಗೋವುಗಳನ್ನು ಪೂಜಿಸುವುದು ನಮ್ಮ ಸಂಸ್ಕೃತಿ. ಹಸುವನ್ನು ಗೋಮಾತೆ ಎಂದು ಪೂಜಿಸುತ್ತೇವೆ. ಆದರೆ ಹಸುಗಳ ಮೇಲೆ ಇಂದು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲ ಕೆಚ್ಚಲನ್ನು ಕೊಯ್ದಿದ್ದಾರೆ, ಕಾಲುಗಳಿಗೂ ಗಾಯ ಮಾಡಿದ್ದಾರೆ. ಹಿಂದುಗಳಿಗೆ ಯಾವ ಸಂದೇಶ ನೀಡಲು ಹೊರಟಿದ್ದಾರೆ ಇವರು? ಸರ್ಕಾರ ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕ್ರಮಕ್ಕೆ ಮುಂದಾಗದಿದ್ದರೆ ಕರಾಳ ಸಂಕ್ರಾಂತಿಗೆ ಕರೆ ಕೊಡಬೇಕಾಗುತ್ತದೆ ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo