Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ದೊಡ್ಡಣಗುಡ್ಡೆ: ಇಂದಿನಿಂದ ಫಲಪುಷ್ಪ ಪ್ರದರ್ಶನ


ಉಡುಪಿ : ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಗಳ ಸಹಯೋಗದಲ್ಲಿ ಫಲಪುಷ್ಪ ಪ್ರದರ್ಶನ -2025 ಜ.25ರಿಂದ 27ರ ವರೆಗೆ ನಗರದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಬೆಳಗ್ಗೆ 9:30ಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo