ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಹೊಳೆಬಾಗಿಲಿನಲ್ಲಿ ಸ್ವರ್ಣಾ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 2 ಯುನಿಟ್ ಮರಳು ಸಹಿತ ಲಾರಿ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ಸಂಭವಿಸಿದ ಸಂದರ್ಭದಲ್ಲಿ ಮರಳು ಸಂಗ್ರಹಿಸುತ್ತಿದ್ದ ಮೂರ್ನಾಲ್ಕು ಮಂದಿ ಆರೋಪಿಗಳು ಪೊಲೀಸರನ್ನು ಕಂಡು ಪಕ್ಕದ ಕಾಡಿನೊಳಗೆ ಓಡಿ ಹೋಗಿ ಪರಾರಿಯಾಗಿದ್ದಾರೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ