ಉಡುಪಿ : ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ರಾತ್ರಿ ಕೊರಂಗ್ರಪಾಡಿಯಲ್ಲಿ ಸಂಭವಿಸಿದೆ
ಮೃತವ್ಯಕ್ತಿಯನ್ನು ವಸಂತ ಕೋಟ್ಯಾನ್(59) ಎಂದು ತಿಳಿದು ಬಂದಿದೆ.
ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಇವರು ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಪೋಲಿಸರಿಗೆ ಲಭ್ಯವಾಗಿದೆ.
ಪಿ.ಎಸ್.ಐ ಪುನೀತ್ ಕುಮಾರ್, ತನಿಖಾ ಸಹಾಯಕಿ ನೇತ್ರಾವತಿ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ