ಅಯೋಧ್ಯ ಶ್ರೀ ರಾಮಮಂದಿರದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 11 ರಿಂದ 13 ರವರೆಗೆ ಪ್ರಾಣ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಈ ವೇಳೆ ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವು ಲಕ್ಷಾಂತರ ಹಿಂದೂಗಳಿಗೆ ನಂಬಿಕೆ, ಭಕ್ತಿ ಮತ್ತು ಪರಿಶ್ರಮದ ಸಂಕೇತವಾಗಿ ನಿಂತಿದೆ.ಜನವರಿ 22, 2024 ರಂದು ಭಕ್ತರು ಮತ್ತು ಗಣ್ಯರು ಭಾಗವಹಿಸಿದ ಭವ್ಯ ಸಮಾರಂಭದಲ್ಲಿ ದೇವಾಲಯವನ್ನು ಉದ್ಘಾಟಿಸಲಾಯಿತು.
ಆದರೆ ಹಿಂದೂ ಪಂಚಾಂಗದ ಪ್ರಕಾರ ಈ ಸಂಭ್ರಮಕ್ಕೆ ಜ.11ರಂದು ವರ್ಷ ಪೂರ್ಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಜ.11ರಿಂದ 13ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ (ಪ್ರತಿಷ್ಠಾ ದ್ವಾದಶಿ) ಹಮ್ಮಿಕೊಳ್ಳಲಾಗಿದೆ.
ಕಳೆದ ವರ್ಷ ಜನವರಿ 22ರಂದು ಐತಿಹಾಸಿಕ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದ ಆಹ್ವಾನಿತ 110 ಗಣ್ಯರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿದೆ. ಗಣ್ಯರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಗಣೀರ ಜೊತೆಗೆ ಜನಸಾಮಾನ್ಯರು ಕೂಡ ಭಾಗವಹಿಸಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ