ಬೆಂಗಳೂರು: ಬಸ್ ಪ್ರಯಾಣಿಕರಿಗೆ ಸರ್ಕಾರ ಶಾಕ್ ನೀಡಿದ್ದು, ಶೇ. 15ರಷ್ಟು ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಡೀಸೆಲ್ ದರ ಏರಿಕೆ, ಸಿಬ್ಬಂದಿ ಸಂಬಳ ಹೆಚ್ಚಳ, ಶಕ್ತಿ ಯೋಜನೆ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಎಸ್ ಆರ್ ಟಿಸಿ ಚೇತರಿಕೆಗೆ ಸಂಪುಟ ಅಸ್ತು ಎಂದಿದೆ.
ಈ ಹಿನ್ನೆಲೆಯಲ್ಲಿ ಶೇ. 15ರಷ್ಟು ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಾರಿಗೆ ಸಚಿವ ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷಗಳಾಗಿವೆ. ಹೀಗಾಗಿ ಕ್ಯಾಬಿನೆಟ್ ಸಭೆಯಲ್ಲಿ ದರ ಏರಿಕೆ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಬಿಜೆಪಿ ಸಾವಿರಾರು ಕೋಟಿ ಸಾಲ ಉಳಿಸಿ ಹೋಗಿದ್ದರು. ಸಾರಿಗೆ ಸಂಸ್ಥೆಗಳು ಉಳಿಬೇಕು ಹೀಗಾಗಿ ಟಿಕೆಟ್ ದರ ಏರಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ನಾಲ್ಕು ನಿಗಮಗಳಿಂದ ಬೇರೆ ಬೇರೆ ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಬಿಎಂಟಿಸಿಯಿಂದ 42%, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿಯಿಂದ 25%, ಕೆಎಸ್‌ಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯಿಂದ 28% ದರ ಏರಿಕೆಗೆ ಪ್ರಸ್ತಾವನೆ ಬಂದಿತ್ತು. ಸಚಿವ ಸಂಪುಟ ಸಭೆಯಲ್ಲಿ ಶೇ. 15ರಷ್ಟು ಏರಿಕೆಗೆ ಒಪ್ಪಿಗೆ ಸೂಚಿಸಲಿಗದೆ ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ