ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ ಸಿಹಿತಿಂಡಿ ನೀಡಿ ಜಾಗೃತಿ ಮೂಡಿಸಿದರು.
ಈ ರೀತಿ ಜ.17ರವರೆಗೆ ಪೊಲೀಸರು ವಾಹನ ಚಾಲಕರಿಗೆ ಚಹಾ ಸಿಹಿತಿಂಡಿಗಳನ್ನು ನೀಡಿ ಅರಿವು ಮೂಡಿಸಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ರೋಟರಿ ಕ್ಲಬ್ ನ ಜೈವಿಠಲ್ ಉಪಸ್ಥಿತರಿದ್ದರು.
ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಸ್ವಾಗತಿಸಿದರು. ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ವಂದಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ