Slider

ಪಳ್ಳಿ-ಮೂಡುಬೆಳ್ಳೆ ರಸ್ತೆ ದುರಸ್ತಿಗೆ ಆಗ್ರಹ


ಪಳ್ಳಿ-ಮೂಡುಬೆಳ್ಳೆ ರಸ್ತೆಯಲ್ಲಿ ಗುಂಡಿಗಳು ಬಾಯ್ತೆರೆದುಕೊಂಡು ವಾಹನಗಳ ಸಂಚಾರಕ್ಕೆ ದುಸ್ಥಿತಿ ಉಂಟಾಗಿದೆ. "ಇತ್ತೀಚಿಗಷ್ಟೇ ರಸ್ತೆಗೆ ತೇಪೆ ಹಾಕಲಾಗಿದ್ದು ಕಳೆದ ಮಳೆಗಾಲದ ನಂತರ ರಸ್ತೆ ಮತ್ತೆ ಬಿರುಕು ಬಿಟ್ಟಿದೆ. ಹೊಂಡಗಳನ್ನು ತಪ್ಪಿಸುವ ಪ್ರಯತ್ನದಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ವಾಹನಗಳು ತಾಂತ್ರಿಕ ಸಮಸ್ಯೆ ಎದುರಿಸುತ್ತಿದೆ. ಮುಂದಿನ‌ ತಿಂಗಳೊಳಗೆ ರಸ್ತೆಯನ್ನು ಸಂಪೂರ್ಣ ಮರುನಿರ್ಮಾಣ ಮಾಡಿ ಮಳೆಗಾಲದ ಒಳಗೆ ಒಣಗಿ ಸುಸಜ್ಜಿತವಾಗಬೇಕಾಗಿದೆ. ಕಾರ್ಕಳ-ಉಡುಪಿ ಮುಖ್ಯ ರಸ್ತೆಯ ವಾಹನ ದಟ್ಟಣೆಯನ್ನು ತಪ್ಪಿಸುವ ಸಲುವಾಗಿ ಅನೇಕ ವಾಹನಗಳು ಪಳ್ಳಿ, ನಾಲ್ಕುಬೀದಿ ಮೂಲಕ ಮಣಿಪಾಲ ಉಡುಪಿ ಕಡೆಗೆ ಸಂಚರಿಸುತ್ತಿವೆ. ಆದ್ದರಿಂದ ಈ ಬಗ್ಗೆ ಅತಿ ಶೀಘ್ರದಲ್ಲಿ ಕ್ರಮಕೈಗೊಳ್ಳಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಾಮಾಜಿಕ‌‌‌ ಕಾರ್ಯಕರ್ತ ವಿಷ್ಣುಪ್ರಸಾದ್ ಕೊಡಿಬೆಟ್ಟು‌ ಮನವಿ‌ ಮಾಡಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo