Slider

ಮಣಿಪಾಲ: ಬೈಕ್ ಢಿಕ್ಕಿ: ಪಾದಚಾರಿ ಸಾವು

#ಮಣಿಪಾಲ #ರಸ್ತೆಅಪಘಾತ #ಮರಣ


ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆ ಎದುರಿನ ಉಡುಪಿ-ಹಿರಿಯಡಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಿತ್ರದುರ್ಗದ ರಾಜಪ್ಪ ಎಂಬ ವ್ಯಕ್ತಿ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.

ಗಿರೀಶ್ ಎಂಬವರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಹಿರಿಯಡಕದತ್ತ ಬಂದ ಬೈಕ್ ರಾಜಪ್ಪ ಅವರನ್ನು ಢಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ರಾಜಪ್ಪ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಬೈಕ್ ಸವಾರನ ಅಜಾಗರೂಕ ಚಾಲನೆಯೇ ಈ ಅನಾಹುತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo