Slider

ಪಡುಬಿದ್ರಿ: ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ...!! Prime

 


ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ತಿಳಿಯಲಾಗಿದೆ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರು. ಇದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಬುಧವಾರ ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಬುಧವಾರ ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿ ಮಾಡಿ ನೇರ ತಮ್ಮ ಬೆಡ್ ರೂಂಗೆ ತೆರಳಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo