ಮಣಿಪಾಲ: ಮಣಿಪಾಲದ ಶ್ರೀ ಸಾಯಿ ಲಾಡ್ಜ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಸೆನ್ ಪೊಲೀಸ್ ಠಾಣೆಯ ಪ್ರಭಾರ ಪಿಐ ರಾಮಚಂದ್ರ ನಾಯಕ್ ಅವರಿಗೆ ಲಭ್ಯವಾದ ಮಾಹಿತಿಯಂತೆ, ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಪರ್ಕಳ ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ ಈ ಲಾಡ್ಜ್‌ನಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿ ಅಕ್ರಮ ಲಾಭಕ್ಕಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.
ಈ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಿಂದ ಅನುಮತಿ ಪಡೆದು ಪೊಲೀಸ್ ತಂಡವು ಸ್ಥಳಕ್ಕೆ ಭೇಟಿ ನೀಡಿ ದಾಳಿ ನಡೆಸಿದೆ. ದಾಳಿಯಲ್ಲಿ ನೊಂದ ಮಹಿಳೆಯನ್ನು ರಕ್ಷಿಸಲಾಗಿದ್ದು, ಆರೋಪಿ ಶರಣಪ್ಪನನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ