Slider

ಹೆಚ್‌ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

 


ಬೆಂಗಳೂರು: ಹೆಚ್‌ಎಂಪಿ ವೈರಸ್ (ಹೆಚ್‌ಎಂಪಿವಿ) ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೆಚ್‌ಎಂಪಿ ವೈರಸ್ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್‌ಎಂಪಿ ವೈರಸ್ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್‌ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್‌ಎಂಪಿ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ.

ಚೀನಾದಲ್ಲಿ ಮ್ಯೂಟೆಟ್ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್‌ಎಂಪಿ ವೈರಸ್ ರೀತಿ ನೂರಾರು ವೈರಸ್‌ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್‌ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್ ಆಗಲಿದೆ ಎಂದಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo