ಮಣಿಪಾಲ: ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಕೆರೆಯ ಮರು ನಿರ್ಮಾಣದ ಕಾಮಗಾರಿ ಆರಂಭ ಮಾಡುವಂತೆ ಸೂಚನೆ ನೀಡಿದರು.
ಕಳೆದ ಮಳೆಗಾಲದಲ್ಲಿ ಕೆರೆ ಕಾಮಗಾರಿ ಹಂತದಲ್ಲೇ ಕುಸಿದ ಹಿನ್ನೆಲೆಯಲ್ಲಿ ಹಿರಿಯ ತಾಂತ್ರಿಕ ಪರಿಣಿತರ ಸಲಹೆಯಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಅಭಿಪ್ರಾಯ ಪಡೆದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ಶ್ರೀಮತಿ ಸುಮಿತ್ರಾ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಪ್ರಮುಖರಾದ ಶ್ರೀ ದಿನೇಶ್ ಹೆಗ್ಡೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ