ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಒಬ್ಬ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ ಎಂದು ತಂದೆಯೊಂದಿಗೆ ಹಂಚಿಕೊಂಡಿದ್ದರು ಎಂದು ತಿಳಿದುಬಂದಿದೆ.
ಸುಮಾರು 10 ದಿನಗಳಿಂದ ಮೌನವಾಗಿದ್ದ ವೆಂಕಟೇಶ್, ನಿನ್ನೆ ತಡರಾತ್ರಿ ತನ್ನ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಯ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
[ಉಡುಪಿ ಫಸ್ಟ್]
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ