ಮಂಗಳೂರು : ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂ.ಎಸ್.ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ (22) ಅವರು ಮಂಗಳೂರಿನ ಹೊರವಲಯದ ಅರ್ಕುಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪ್ರವಿತ್ ಆಚಾರ್ಯ, ಮೂಲತಃ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರ. ಅವರು ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಎಸ್.ಡಬ್ಲ್ಯು ವಿದ್ಯಾರ್ಥಿಯಾಗಿದ್ದರು.
ಮಂಗಳವಾರ ಸಂಜೆ, ಪ್ರವಿತ್ ಕಾಲೇಜು ಮುಗಿಸಿ ಬಿ.ಸಿ. ರೋಡ್‌ನಲ್ಲಿದ್ದ ಬೈಕ್ ಹತ್ತಿ ಮಂಗಳೂರಿನತ್ತ ಬರುತ್ತಿದ್ದರು. ಅರ್ಕುಳಕ್ಕೆ ಬರುತ್ತಿದ್ದಂತೆ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅವರು ರಸ್ತೆಗೆಸೆಯಲ್ಪಟ್ಟರು. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಐಸ್‌ಕ್ರೀಂ ಸಾಗಣೆಯ ವಾಹನ ಪ್ರವಿತ್ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿಯೂ ಯಕ್ಷಗಾನ ಕಲಾಸಕ್ತರ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಯಕ್ಷಗಾನ ಕಲಾವಿದರ ಸಮುದಾಯದಲ್ಲಿ ಶೋಕದ ಛಾಯೆ ಆವರಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ