Slider

ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ : ಶಾಸಕ ಸುನಿಲ್ ಕುಮಾರ್

 


ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo