Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉದ್ಯಾವರ: ಭೀಕರ ರಸ್ತೆ ಅಪಘಾತ: ಮೂವರಿಗೆ ಗಾಯ


ಉಡುಪಿ, ಫೆಬ್ರವರಿ 3: ಉಡುಪಿ ತಾಲೂಕಿನ ಉದ್ಯಾವರ ಗ್ರಾಮದ ಟೊಯೋಟಾ ಶೋ ರೂಂ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಕರಣದ ವಿವರ ಇಂತಿದೆ: ತನೀಶ್ (18) ಎಂಬ ಯುವಕ ತನ್ನ ಸ್ಕೂಟರ್‌ನಲ್ಲಿ ಕಟಪಾಡಿಯಿಂದ ಉದ್ಯಾವರದ ತನ್ನ ಮನೆಗೆ ಹಿಂದಿರುಗುತ್ತಿದ್ದಾಗ, ಮಂಗಳೂರಿನಿಂದ ಉಡುಪಿಯ ಕಡೆಗೆ ಅತಿವೇಗವಾಗಿ ಚಲಿಸುತ್ತಿದ್ದ ಬುಲೆಟ್ ಬೈಕ್ (KA-18-EJ-2920) ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಚಲಾಯಿಸುತ್ತಿದ್ದ ಶ್ರೀನಿಧೀಶ್ ಮತ್ತು ಅವರ ಹಿಂಬದಿ ಸವಾರ ಪ್ರಭಂಜನ್ ಹಾಗೂ ಸ್ಕೂಟರ್ ಚಲಾಯಿಸುತ್ತಿದ್ದ ತನೀಶ್ ಈ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ ಪಾದಚಾರಿ ಅಲಕ್ಕಂಡಿ ಕರುಣಾನ್ ಎಂಬುವವರಿಗೂ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo