ಮಲ್ಪೆ, ಫೆಬ್ರವರಿ 28, 2025: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ 8.30ರ ಸುಮಾರಿಗೆ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ರವಿ ಬಿ.ಕೆ. ಅವರು ಕೊಡವೂರು ಗ್ರಾಮದ ಸಿಟಿಜನ್ ಸರ್ಕಲ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.
ಕೊಡವೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಕಂಡುಬಂದಿದೆ. ಟಿಪ್ಪರ್ ಚಾಲಕ ಪ್ರದೀಪ್ ಹಾಗೂ ಆತನ ಜೊತೆಗಿದ್ದ ಮೊಹಮ್ಮದ್ ಹನೀಫ್ ಮತ್ತು ಮನೀಷ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟಿಪ್ಪರ್‌ನಲ್ಲಿ ಸುಮಾರು 3 ಯುನಿಟ್ ಮರಳಿದ್ದು, ಇದಕ್ಕೆ ಯಾವುದೇ ಪರವಾನಗಿ ಇಲ್ಲದಿರುವುದು ತನಿಖೆಯಿಂದ ತಿಳಿದುಬಂದಿದೆ. ಮರಳನ್ನು ಮೂಲ್ಕಿಯ ಪಕ್ಷಿಕೆರೆ ಕಡೆಯಿಂದ ತಂದಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ