ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ತೆಂಕನಿಡಿಯೂರಿನ ಕಿರಣ್ ಮಿಲ್ಕ್ ಸಂಸ್ಥೆಯ ಮಾಲಕರಾದ ಟಿ. ಗೋಪಾಲಕೃಷ್ಣ ಶೆಟ್ಟಿ(77)ಯವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
ಟಿ. ಗೋಪಾಲಕೃಷ್ಣ ಶೆಟ್ಟಿ ಇವರು ತಾಲೂಕು ಪಂಚಾಯತ್ ಸದಸ್ಯರಾಗಿ, ಸ್ಥಳೀಯವಾಗಿ ಸಾಮಾಜಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರಗಳಿಗೆ ಪ್ರೋತ್ಸಾಹಕರಾಗಿ ಜನಮೆಚ್ಚುಗೆ ಪಡೆದಿದ್ದರು.
ಪ್ರಸುತ್ತ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗೌರವ ಸಲಹೆಗಾರರಾಗಿದ್ದ ಟಿ. ಗೋಪಾಲಕೃಷ್ಣ ಶೆಟ್ಟಿಯವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ