ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಲಿಕಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿಗೆ ಕ್ಲೀನ್ ಚೀಟ್ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಪತ್ನಿ ಪಾರ್ವತಿ ಮತ್ತು ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜ್ ಒಳಗೊಂಡಂತೆ ನಾಲ್ವರು ಆರೋಪಿಗಳಿಗೂ ವಿರುದ್ದ ಯಾವುದೇ ಸಾಕ್ಷಾಧಾರ ಇಲ್ಲದ ಕಾರಣ ಲೋಕಾಯುಕ್ತ ಅಧಿಕಾರಿಗಳು ದೋಷಮುಕ್ತ ಗೊಳಿಸಿದ್ದಾರೆ. ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆ.
ದೂರುದಾರ ಸೇಹಮಯಿ ಕೃಷ್ಣಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. ಹೀಗಾಗಿ ಸ್ನೇಹಮಯಿ ಕೃಷ್ಣಗೆ ಮುಡಾ ಉರುಳು ಸುತ್ತಿಕೊಂಡಿದೆ.
ಈ ಬಗ್ಗೆ ಮಾತನಾಡಿರುವ ದೂರುದಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ವಿರುದ್ದ ವಾಗ್ದಾಳಿ ನಡೆಸಿದ್ದು, ಲೋಕಾಯುಕ್ತ ಅಧಿಕಾರಿಗಳು ಆತ್ಮಸಾಕ್ಷಿಯನ್ನು ಮಾರಿಕೊಂಡಿದ್ದಾರೆ. ಸಾಕ್ಷಾಧಾರ ಕೊರತೆ ಇದೆ ಎಂದು ಹೇಳಿದ್ದು, ಇದು ಅಧಿಕಾರಿಗಳಿಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಸಿಎಂ ವಿರುದ್ದವು ಕೂಡ ಹರಿಹಾಯ್ದಿದ್ದಾರೆ. ನಾನು ರಾಜ್ಯದ ಮುಂದೆ ಸತ್ಯ ವನ್ನು ಸಾಬೀತು ಮಾಡುವೆ. ತಾಕತ್ತು ಇದ್ರೆ ಅಧಿಸೂಚನೆಯಲ್ಲಿ 50: 50 ಅನುಪಾತ ತೋರಿಸಲಿ ಎಂದು ಸಿಎಂ ಗೆ ಸವಾಲು ಹಾಕಿದ್ದಾರೆ. ಜೊತೆಗೆ ಇನ್ನು ಒಂದು ವಾರದ ಒಳಗೆ ತಕರಾರು ಅರ್ಜಿ ಸಲ್ಲಿಸುವೆ ಎಂದು ಸ್ನೇಹಮಯಿ ಗುಡುಗಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ