Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ - ಮಲ್ಪೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಲು ಮನವಿ...!!

 


ಉಡುಪಿ: ಮಲ್ಪೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸಲು ಜಿಲ್ಲಾಧಿಕಾರಿ ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮನವಿ ಮಾಡಲಾಯಿತು.

ಉಡುಪಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದೆಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಯಾಗುತ್ತಿದ್ದು ಮಲ್ಪೆ ಮತ್ತು ಮಲ್ಪೆಯ ಆಸುಪಾಸಿನ ಪ್ರದೇಶಗಳಿಂದ ಪ್ರತಿನಿತ್ಯ ಉಡುಪಿಗೆ ಬಂದು ಹೋಗುವ ಸಾವಿರಾರು ಸಾರ್ವಜನಿಕರು ಇಲ್ಲಿನ ರಾಷ್ಟ್ರೀಯ ಹೆದ್ದಾರಿ ತೀರಾ ಹದೆಗೆಟ್ಟಿರುವುದರಿಂದ ತುಂಬಾ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇಲ್ಲಿನ ರಸ್ತೆಯು ಸಂಪೂರ್ಣ ದೊಡ್ಡ ದೊಡ್ಡ ಹೊಂಡ ಗುಂಡಿಗಳಿಂದ ತುಂಬಿರುವುದರಿಂದ ಹಲವು ಅಪಘಾತಗಳು ಸಂಭವಿಸಿದ್ದು ರಾಷ್ಟ್ರೀಯ ಹೆದ್ದಾರಿಯನ್ನುಶೀಘ್ರ ದುರಸ್ತಿಗೊಳಿಸಲು ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಡೆಕಾರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಯುವರಾಜ್ ಪುತ್ತೂರು, ಸಂಧ್ಯಾ ತಿಲಕ್‌ರಾಜ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಶರತ್ ಶೆಟ್ಟಿ, ಶಶಿರಾಜ್ ಕುಂದರ್, ಸತೀಶ್ ಕೊಡವೂರು, ನಾರಾಯಣ ಕುಂದರ್, ಸತೀಶ್ ಪುತ್ರನ್, ಭರತ್ ಮಣಿಪಾಲ, ಅರ್ಚನಾ ದೇವಾಡಿಗ, ಸಂಜಯ್ ಆಚಾರ್ಯ, ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ನಾಯರಿ, ಸಾಗರ್ ಸನಿಲ್ ಅವರು ಉಪಸ್ಥಿತರಿದ್ದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo