ಮಣಿಪಾಲ, ಫೆಬ್ರವರಿ 17: ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಒಡಿಸ್ಸಿ ಕಟ್ಟಡದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 16/02/2025 ರಂದು ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಅನಿಲ್ ಕುಮಾರ್ ಡಿ ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಯಿತು. ಈ ವೇಳೆ ಇಕ್ಬಾಲ್, ಕೃಷ್ಣ ಮತ್ತು ಚೇತನ್ ಎಂಬ ಮೂವರು ವ್ಯಕ್ತಿಗಳು ಮಾರುತಿ ಸುಜುಕಿ ಕಾರಿನಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು.
ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ 86.25 ಗ್ರಾಂ ಗಾಂಜಾ ಮತ್ತು 1.93 ಗ್ರಾಂ ಎಂಡಿಎಂಎ ಹಾಗೂ ಕಪ್ಪು ಬಣ್ಣದ ಮಾರುತಿ ಸುಜುಕಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ