ಉಡುಪಿ, ಫೆಬ್ರವರಿ 20: ಉಡುಪಿ ನಗರದ ಶಿವಳ್ಳಿ ಗ್ರಾಮದ ಫಿಶ್ ಮಾರ್ಕೆಟ್ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ಅಡ್ಡೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ದಾಳಿ ನಡೆಸಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸಿ ಚೀಟಿ ಬರೆದು ಕೊಡುತ್ತಿದ್ದ ಗಣಪತಿ ಎಂಬಾತನನ್ನು ವಶಕ್ಕೆ ಪಡೆದರು.
ವಿಚಾರಣೆ ವೇಳೆ ಗಣಪತಿಯು ತಾನು ಕಮಿಷನ್ ಹಣಕ್ಕಾಗಿ ದಿವಾಕರ ಎಂಬಾತ ತಿಳಿಸಿದಂತೆ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಅಂಕೆ ಸಂಖ್ಯೆಗಳ ಮೇಲೆ ಹಣ ಹೂಡುವಂತೆ ಹೇಳಿ ಚೀಟಿಯಲ್ಲಿ ನಮೂದು ಮಾಡಿಕೊಂಡು ಹಣವನ್ನು ಸಂಗ್ರಹಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಸಂಗ್ರಹಿಸಿದ ಹಣವನ್ನು ದಿವಾಕರನಿಗೆ ತಲುಪಿಸುತ್ತಿರುವುದಾಗಿ ತಿಳಿಸಿದ್ದಾನೆ.
ಪೊಲೀಸರು ಆರೋಪಿಯಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ 1280 ರೂಪಾಯಿ ನಗದು ಹಣ, ಮಟ್ಕಾ ನಂಬರ್ ಬರೆದ ಪೇಪರ್, ಬಾಲ್ ಪೆನ್ ಮತ್ತು ಸ್ಲೇಟ್ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ