ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ಈ ಕುರಿತು ರೈಲ್ವೆ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ದಿನಾಂಕ ಫೆಬ್ರವರಿ 17 ರಂದು ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ರೈಲು ಹೊರಡಲಿದ್ದು, ಕುಂಭಮೇಳಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿಶೇಷ ರೈಲು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಯಾಣಿಕರಿಗೆ ವರದಾನವಾಗಿದ್ದು, ಕಡಿಮೆ ಖರ್ಚಿನಲ್ಲಿ ಕುಂಭಮೇಳಕ್ಕೆ ತೆರಳಲು ಸಾಧ್ಯವಾಗುತ್ತದೆ.
ಈ ರೈಲು ಸೇವೆಯನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳುವಂತೆ ಕೋರಲಾಗಿದೆ. ಟಿಕೆಟ್‌ಗಳು ಫೆಬ್ರವರಿ 14 ರಿಂದ ಲಭ್ಯವಿದ್ದು, ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಪಡೆದುಕೊಳ್ಳಬಹುದು.
ಈ ವಿಶೇಷ ರೈಲು 17ನೇ ತಾರೀಖು ಮಧ್ಯಾಹ್ನ 12.30ಗೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ