Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಾ.2ರಂದು ಡಿಸಿಎಂ ಡಿ.ಕೆ. ಶಿವಕುಮಾರ್ ಉಡುಪಿಗೆ ಭೇಟಿ.

 


ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಾ.2 ರಂದು ಉಡುಪಿಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.

ನಾಯರ್‌ಕೆರೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಮಾ.2ರ ರವಿವಾರ ಬೆಳಗ್ಗೆ ಕಾಪುವಿಗೆ ಆಗಮಿಸುವ ಡಿಕೆಶಿ ಅವರು ಅಲ್ಲಿ ಮಾರಿಕಾಂಬಾ ದೇವಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.ಆ ಬಳಿಕ ಅಪರ್ನಾ 12:30ರ ಸುಮಾರಿಗೆ ಅವರು ಉಪಮುಖ್ಯಮಂತ್ರಿ ಯಾಗಿ ಮೊದಲ ಬಾರಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ ಎಂದ ಅವರು ಕಾಪುವಿನಲ್ಲಿ ಡಿಕೆಶಿ ಅವರನ್ನು ಸ್ವಾಗತಿಸಿ ಉಡುಪಿಗೆ ಕರೆತರಲಾಗುವುದು ಎಂದರು.

ಇಲ್ಲಿನ ಕಾರ್ಯಕ್ರಮದ ಬಳಿಕ ಅಪರಾಹ್ನ 2ಗಂಟೆಗೆ ಅವರು ವಾಹನಗಳ ಬೃಹತ್ ರ್ಯಾಲಿಯಲ್ಲಿ ಕಾರ್ಕಳಕ್ಕೆ ತೆರಳಲಿದ್ದು 4ಗಂಟೆಗೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿ ದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 15,000ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಹಿರಿಯ ಕಾಂಗ್ರೆಸ್ ನಾಯಕರಾದ ಎಂ.ಎ.ಗಫೂರ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಕಿಶನ್‌ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್‌ರಾಜ್ ಕಾಂಚನ್, ರಾಜು ಪೂಜಾರಿ, ರಮೇಶ್ ಕಾಂಚನ್, ಡಾ.ಸುನೀತಾ ಶೆಟ್ಟಿ, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರು ಮುಂತಾದ ವರು ಉಪಸ್ಥಿತರಿದ್ದರು

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo