ಘಟನೆಯ ವಿವರ:
ಮೂರು ದಿನಗಳ ಹಿಂದೆ ಮಲ್ಪೆ ಬಂದರಿನಲ್ಲಿ ನಡೆದ ಈ ಘಟನೆಯಲ್ಲಿ, ಮಹಿಳೆಯೊಬ್ಬರು ಒಂದು ಬುಟ್ಟಿ ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಸ್ಥಳೀಯರು ಆಕೆಯನ್ನು ಮರಕ್ಕೆ ಕಟ್ಟಿ ಹಾಕಿದ್ದಾರೆ. ವಿಡಿಯೋದಲ್ಲಿ, ಮಹಿಳೆಯೊಬ್ಬರು ಸಂತ್ರಸ್ತೆಯ ಕಪಾಳಕ್ಕೆ ಹೊಡೆಯುತ್ತಿರುವುದು ಮತ್ತು ಪುರುಷರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ