Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ನಾಗರಿಕ ಸಮಿತಿ ನೇತೃತ್ವದಲ್ಲಿ ಅಣಕು ಶವ ಯಾತ್ರೆ...!!

 


ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದಿದ್ದು, ಇದುವರೆಗೂ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ‌ ನಾಗರಿಕ ಸಮಿತಿ ನೇತೃತ್ವದಲ್ಲಿ ಇಂದು ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಅಣಕು ಶವ ಯಾತ್ರೆ ಮೂಲಕ ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದರು. ತಕ್ಷಣವೇ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಲಾಯಿತು.

ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ‌ ಒಳಕಾಡು ಮಾತನಾಡಿ, ಈ ರಸ್ತೆ ಕಾಮಗಾರಿ ಶೀಘ್ರವೇ ಮುಗಿಯಬೇಕು. ಜಿಲ್ಲಾಧಿಕಾರಿ, ಎಸ್ಪಿ ಮಾತಿಗೂ ಕವಡೆ ಕಾಸಿನ ಕಿಮ್ಮಿತ್ತಿಲ್ಲ. ಇಲ್ಲಿನ ಸಂಸದರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಶಾಲಾ ಮಕ್ಕಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದು ಕೊನೆಯ ಹೋರಾಟ. ಜೀವ ಹಾನಿ ಆಗುವುದನ್ನು ತಪ್ಪಿಸುವುದೇ ನಮ್ಮ ಉದ್ದೇಶ. ಅದಕ್ಕಾಗಿ ನಾವು ಜೀವಂತ ಶವವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಹರೀಶ್ ಪೂಜಾರಿ, ವಿನಯ ಸಾಸ್ತಾನ, ಗಣೇಶ್ ರಾಜ್‌ ಸರಳೇಬೆಟ್ಟು, ಯಾದವ್ ಆಚಾರ್ಯ ದೊಡ್ಡಣಗುಡ್ಡೆ, ಸತೀಶ್ ಕುಮಾರ್‌ ಉಡುಪಿ, ನೀತು ನಿಟ್ಟೂರು, ಸಂದೀಪ್ ಕಲ್ಮಾಡಿ, ಬಾಲಚಂದ್ರ ರಾವ್ ಉಪಸ್ಥಿತರಿದ್ದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo