ಉಡುಪಿ, ಮಾ. 17: ಉಡುಪಿ ನಗರದ ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯ ಡಯಾನ ಟಾಕೀಸ್ ಬಳಿ ಇರುವ ಬೀಡನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 32,800 ರೂ. ನಗದು, ಇಸ್ಪೀಟು ಎಲೆಗಳು, ಕ್ಯಾಂಡಲ್ ಹಾಗೂ ಬೆಂಕಿಪಟ್ಟಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾ. 16 ರಂದು ರಾತ್ರಿ, ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪುನೀತ್ ಕುಮಾರ್ ಬಿ. ಈ. ಅವರಿಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿತ್ತು. ದಾಳಿಯ ವೇಳೆ, ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್ ಸಾಬ್, ಸಿದ್ದಪ್ಪ, ಗುರು ಮತ್ತು ಪರಶುರಾಮ ಎಂಬ ಏಳು ಮಂದಿ ಅಂದರ್-ಬಾಹರ್ ಇಸ್ಪೀಟು ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿದೆ.
ಬಂಧಿತರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 49/2025 ಕಲಂ: 87 ಕರ್ನಾಟಕ ಪೊಲೀಸ್ ಕಾಯಿದೆ & ಕಲಂ : 112 BNS ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ