ಉಡುಪಿ: ಪಕ್ಷದೊಳಗಿನ ಎಲ್ಲಾ ವಿವಾದಗಳಿಗೂ ಇತಿಶ್ರೀ ಹಾಕುವ ಕಾಲ ಕೂಡಿಬಂದಿದೆ. ಸದ್ಯದಲ್ಲೇ ರಾಜ್ಯದ ಅಧ್ಯಕ್ಷರು ಯಾರಾಗುತ್ತಾರೆ ಎಂಬುದು ಗೊತ್ತಾಗುತ್ತದೆ. 12 ರಾಜ್ಯಗಳಿಗೆ ಮಾತ್ರ ಅಧ್ಯಕ್ಷರ ನೇಮಕಾತಿ ಯಾಗಿದೆ. ನಮ್ಮ ರಾಜ್ಯ ಒಳಗೊಂಡಂತೆ ಇತರ ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಕೆಲವೇ ದಿನಗಳಲ್ಲಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ಸಮಸ್ಯೆ ವಿಶೇಷವಾಗಿದೆ. ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಎಲ್ಲ ಸಮಸ್ಯೆ ಬಗೆಹರಿಯಲಿದೆ. ಏನೇ ಸಮಸ್ಯೆಗಳು ಬಂದರೂ ನಾನು ನಿರಾಳವಾಗಿ ರುತ್ತೇನೆ. ಸಮಸ್ಯೆಗೆ ಉತ್ತರ ಏನು ಎಂಬುದು ನನಗೆ ಗೊತ್ತಿದೆ. ಅದೇ ರೀತಿ ಕೇಂದ್ರದ ವರಿಷ್ಠರಿಗೂ ಗೊತ್ತಿದೆ. ಎಲ್ಲ ಸಮಸ್ಯೆಗಳಿಗೂ ಕೇಂದ್ರದ ವರಿಷ್ಠರು ಒಳ್ಳೆಯ ಉತ್ತರ ನೀಡುತ್ತಾರೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ