ಮಲ್ಪೆ, ಏ. ೧೫: ಮಲ್ಪೆ ಜಂಕ್ಷನ್ ಬಳಿಯ ಜಾಮೀಯಾ ಮಸೀದಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮಸೀದಿಯ ಮೇನೆಜರ್ ಸುಹೇಲ್ (27) ಅವರು ನೀಡಿದ ದೂರಿನ ಪ್ರಕಾರ, ಮಸೀದಿಗೆ ಸೇರಿದ ಎರಡು ಅಂತಸ್ತಿನ ಕಟ್ಟಡದ ಬಳಿ ಕೆಲಸಗಾರರಿಗಾಗಿ ನಿರ್ಮಿಸಲಾದ ಶೌಚಾಲಯವನ್ನು ಅವರು ಉಪಯೋಗಿಸಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯದ ಒಳಗೆ ನವಜಾತ ಶಿಶುವಿನ ಮೃತದೇಹ ಬಿದ್ದಿರುವುದನ್ನು ಕಂಡು ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಮಲ್ಪೆ ಪೊಲೀಸರು ಪರಿಶೀಲನೆ ನಡೆಸಿದ್ದು, ಶೌಚಾಲಯದ ಗೋಡೆಗಳ ಮೇಲೆ ರಕ್ತದ ಕಲೆಗಳು ಕಂಡುಬಂದಿವೆ. . ಯಾರೋ ಅಪರಿಚಿತ ವ್ಯಕ್ತಿ ಮಗುವಿನ ಮೃತದೇಹವನ್ನು ರಹಸ್ಯವಾಗಿ ವಿಲೇವಾರಿ ಮಾಡಿ, ಮಗುವಿನ ಜನನವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 94 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಮಗುವಿನ ಪೋಷಕರು ಯಾರು ಮತ್ತು ಈ ಕೃತ್ಯಕ್ಕೆ ಕಾರಣರಾದವರು ಯಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ