ರಾಜ್ಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರಾಜ್ಯ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸಿಟಿ ರವಿಗೆ ಬಿಗ್ ರಿಲೀಫ್..! ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಆದೇಶ

 


ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ನೀಡಿದೆ.

ತಮ್ಮ ಮೇಲಿರುವ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಅವರು ಸಲ್ಲಿಸಿದ್ದ ಅರ್ಜಿ ವಿವಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠವು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ.

ಸಿಟಿ ರವಿ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು, ಪೊಲೀಸರು ಬಂಧನಕ್ಕೂ ಮುನ್ನ ಸಿ.ಟಿ ರವಿ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ಸಿ.ಟಿ ರವಿ ಬಂಧನವೇ ಕಾನೂನು ಬಾಹಿರವಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ವಾದಿಸಿದರು.



ಸಿಟಿ ರವಿ ಬಂಧನ ಖಂಡಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

 


ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಬಿಜೆಪಿ ಕರೆ ನೀಡಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಶುಕ್ರವಾರ ಬಂದ್ ಕರೆ ನೀಡಲಾಗಿದೆ. ಜಿಲ್ಲಾ ಬಿಜೆಪಿ ಮುಖಂಡರು ಸಿ.ಟಿ. ರವಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಧುರಾಜ್ ಅರಸ್ ಮನವಿ ಮಾಡಿದ್ದಾರೆ.



ಆಕ್ಷೇಪಾರ್ಹ ಪದಬಳಕೆ ಆರೋಪ: ಮಾಜಿ ಸಚಿವ ಸಿಟಿ ರವಿ ಬಂಧನ


 ವಿಧಾನ ಪರಿಷತ್ ಕಲಾಪ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.

ಕಲಾಪದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ದ ಸಿಟಿ ರವಿ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮಧ್ಯಾಹ್ನ 1 ಗಂಟೆಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಮತ್ತು 79ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 'ಸಿ.ಟಿ. ರವಿ ಅವರು ತಮ್ಮ ಕಡೆಗೆ ನುಗ್ಗಿ ಬಂದು ಸುಮಾರು 10 ಬಾರಿ ಆ 'ಆಕ್ಷೇಪಾರ್ಹ' ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಕೂಡ ಮಾಡಿ, ಮಾನಭಂಗ ಮಾಡಿದ್ದಾರೆ' ಎಂದೂ ದೂರಿನಲ್ಲಿ ಬರೆಯಲಾಗಿದೆ.

ಇದೀಗ ಹಿರೇಬಾಗೇವಾಡಿ ಪೊಲೀಸರು ಸುವರ್ಣ ಸೌಧದಲ್ಲೇ ಧರಣಿ ಕುಳಿತಿದ್ದ ಸಿಟಿ ರವಿ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದ ಪೊಲೀಸರು, ಜೀಪಿನಲ್ಲಿ ಹತ್ತಿಸಿ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು



ಬಿಜೆಪಿ ಸಂಸದರ ಮೇಲೆ ರಾಹುಲ್ ಗಾಂಧಿ ಹಲ್ಲೆ..? ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

 


ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ಪ್ರತಿಭಟನೆ ವೇಳೆ ನಡೆದ ಘರ್ಷಣೆ ಸಂಬಂಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರು ದೊಡ್ಡ ಆರೋಪ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಸಂಸತ್ ಸ್ಟ್ರೀಟ್ ಠಾಣೆಯಲ್ಲಿ ಬಿಜೆಪಿ ಸಂಸದರು ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಅವರ ತಳ್ಳುವಿಕೆಯಿಂದ ಸಂಸತ್ತಿನಲ್ಲಿ ಬಿದ್ದು ತಲೆಗೆ ಗಾಯವಾಗಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಹೇಳಿದ್ದಾರೆ. ನನ್ನ ಮೇಲೆ ಬಿದ್ದ ಸಂಸದರನ್ನು ರಾಹುಲ್ ಗಾಂಧಿ ತಳ್ಳಿದರು, ನಂತರ ನಾನು ಕೆಳಗೆ ಬಿದ್ದೆ… ನಾನು ಮೆಟ್ಟಿಲುಗಳ ಬಳಿ ನಿಂತಿದ್ದಾಗ ರಾಹುಲ್ ಗಾಂಧಿ ಬಂದು ನನ್ನ ಮೇಲೆ ಬಿದ್ದ ಸಂಸದನನ್ನು ತಳ್ಳಿದರು. ಮೇಲೆ ಬಿದ್ದರು," ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.






ಮುಂಬೈ ಗೇಟ್‌ವೇ ಬಳಿ ಪ್ಯಾಸೆಂಜರ್ ಬೋಟ್‌ಗೆ ನೌಕಾ ಹಡಗು ಢಿಕ್ಕಿ: 13ಜನ ಸಾವು

 


ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು 13 ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈ ಬಂದರಿನಲ್ಲಿ ಇಂಜಿನ್ ಟ್ರಯಲ್ಸ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಭಾರತೀಯ ನೌಕಾಪಡೆಯ ನೌಕೆ ನಿಯಂತ್ರಣ ಕಳೆದುಕೊಂಡು ಪ್ಯಾಸೆಂಜರ್ ಬೋಟ್ ಗೆ ಡಿಕ್ಕಿ ಹೊಡೆದಿದೆ.

CLICK HERE SHOP NOW

ಪ್ರಯಾಣಿಕರ ಬೋಟ್ ಗೆ ಡಿಕ್ಕಿ ಹೊಡೆದು ದೋಣಿ ಮಗುಚಿದೆ. ಸಮುದ್ರದಲ್ಲಿ ಮುಳುಗಿ 13 ಜನ ಸಾವನ್ನಪ್ಪಿದ್ದಾರೆ. 101 ಜನರನ್ನು ರಕ್ಷಣೆ ಮಾಡಲಾಗಿದೆ. 4 ಸೇನಾ ಹೆಲಿಕಾಪ್ಟರ್ ಗಳು, 11 ನೌಕಾ ಕ್ರಾಫ್ಟ್ ಗಳು, 1 ಕೋಸ್ಟ್ ಗಾರ್ಡ್ ನೌಕೆಯಿಂದ ಕಾರ್ಯಾಚರಣೆ ನಡೆಸಲಾಗಿದೆ.

ದೋಣಿ ಮಗುಚಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ., ಮೃತರಲ್ಲಿ ಹತ್ತು ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ದ್ವೀಪಕ್ಕೆ ದೋಣಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.



'ಒನ್ ನೇಷನ್, ಒನ್ ಎಲೆಕ್ಷನ್' ಪರ 269ಮತ ವಿರುದ್ಧವಾಗಿ 198ಮತ

 


ನವದೆಹಲಿ : 'ಒನ್ ನೇಷನ್, ಒನ್ ಎಲೆಕ್ಷನ್' ಮಸೂದೆಯನ್ನು ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಮಂಡಿಸಲಾಗಿದೆ. ಈ ಮಸೂದೆಯನ್ನು ಲೋಕಸಭೆಯು 269 ಮತಗಳಿಂದ ಅಂಗೀಕರಿಸಿದರೆ, ವಿರುದ್ಧವಾಗಿ 198 ಮತಗಳು ಚಲಾವಣೆಯಾದವು.
CLICK HERE SHOP NOW

ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಕಾರ್ಯವಿಧಾನವನ್ನು ರೂಪಿಸುವ ಎರಡು ಮಸೂದೆಗಳನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಂಡಿಸಿದರು.

ಈ ಮಸೂದೆಯು ಲೋಕಸಭೆ ಮತ್ತು ದೇಶದ ಎಲ್ಲಾ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಸಂಬಂಧಿಸಿದೆ. ಆದರೆ ಪ್ರತಿಪಕ್ಷಗಳು ಈ ಮಸೂದೆಯನ್ನು ತಿರಸ್ಕರಿಸಿದ್ದು, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾಯಿತು.

ಈ ಮಸೂದೆಯನ್ನು ಪರಿಚಯಿಸಿದ ನಂತರ ಸಚಿವ ಮೇಘವಾಲ್ ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ವಿವರವಾದ ಚರ್ಚೆಗಾಗಿ ಜಂಟಿ ಸಮಿತಿಗೆ ಕಳುಹಿಸಲು ವಿನಂತಿಸಿದ್ದಾರೆ. ಡಿಸೆಂಬರ್ 12 ರಂದು ಕೇಂದ್ರ ಸಚಿವ ಸಂಪುಟವು ಈ ಮಸೂದೆಯನ್ನು ಅನುಮೋದಿಸಿತು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಜಾಪ್ರಭುತ್ವದ ಪ್ರಮುಖ ಹೆಜ್ಜೆ ಎಂದು ಬಣ್ಣಿಸಿದರು.


ಪದ್ಮಶ್ರೀ ಪುರಸ್ಕೃತೆ, ಪರಿಸರ ಪ್ರೇಮಿ ತುಳಸಿ ಗೌಡ ಇನ್ನಿಲ್ಲ

 


ಭಾರತದ ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ (86) ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಸಂಜೆ ವೇಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳಸಿ ಪರಿಸರ ಪ್ರೇಮಿ ಎಂದೇ ಖ್ಯಾತವಾಗಿದ್ದರು.

CLICK HERE SHOP NOW

ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಪತ್ನಿ ಸೇರಿ ಮೂವರು ಆರೋಪಿಗಳು ಅರೆಸ್ಟ್

 


ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಸುಭಾಷ್ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಉತ್ತರಪ್ರದೇಶದ ಅಲಹಾಬಾದ್ ನಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
CLICK HERE SHOP NOW

ಪತ್ನಿಯ ಕಿರುಕುಳಕ್ಕೆ ಬೇಸತ್ತು ಟಕ್ಕಿ ಅತುಲ್ ಸುಭಾಷ್ ಸುಮಾರು 24 ಪುಟಗಳಷ್ಟು ಕಿರುಕುಳದ ಬಗ್ಗೆ ಡೆತ್ ನೋಟ್ ಅಲ್ಲಿ ಉಲ್ಲೆಖಿಸಿದ್ದರು. ಪತ್ನಿ ತಮಗೆ ನೀಡುತ್ತಿರುವ ಕಿರುಕುಳದ ಬಗ್ಗೆ ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯ, ನೀಶಾ, ಹಾಗೂ ಅನುರಾಗ್ ಸಿಂಘಾನಿಯ ಅವರನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ.ಈ ಹಿನ್ನೆಲೆ ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೊಟೀಸ್ ಅಂಟಿಸಿ ಬಂದಿದ್ದರು. ಅದರಲ್ಲಿ 'ನಿಮ್ಮನ್ನು ವಿಚಾರಣೆ ಮಾಡಲು ಸಮಂಜಸವಾದ ಆಧಾರಗಳಿವೆ. ಮೂರು ದಿನಗಳೊಳಗೆ ಬೆಂಗಳೂರಿನ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಪೊಲೀಸರು ಪತ್ನಿ ನಿಕಿತಾ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ.




ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ 150 ಕೋಟಿ ರೂ. ಆಮಿಷವೊಡ್ಡಿರುವ ಅನ್ವರ್ ಮಾಣಿಪ್ಪಾಡಿ ಆರೋಪದ ಸಿಬಿಐ ತನಿಖೆಯಾಗಲಿ: ಸಿದ್ದರಾಮಯ್ಯ


ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ತೀವ್ರವಾಗುವ ನಡೆದಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಬಾಂಬನ್ನು ಸಿಡಿಸಿದ್ದು, ವಕ್ಫ್ ಆಸ್ತಿ ಕಬ್ಬಳಿಕೆಯ ಬಗ್ಗೆ ಮೌನವಾಗಿರಲು ಬಿವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು BY ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.

''ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ'' ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ''ನಾ ಖಾವೂಂಗಾ, ನಾ ಖಾನೆ ದೂಂಗಾ'' ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ವಕ್ಪ್ ಆಸ್ತಿ ವಿಚಾರದಲ್ಲಿ BY ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಬಿಜೆಪಿ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಆರೋಪಿಸಬೇಕಾಗುತ್ತದೆ.

ಪ್ರಧಾನಿ ನರೇಂದ್ರಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.




ನಟ ದರ್ಶನ್‌ಗೆ ಜಾಮೀನು ಮಂಜೂರು

 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ.
CLICK HERE SHOP NOW

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಇದೀಗ ಜಾಮೀನು ಮಂಜೂರು ಆಗಿದೆ.

ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ದರ್ಶನ್ ಆಯಂಡ್ ಗ್ಯಾಂಗ್ ಅಪಹರಿಸಿ ಆರ್.ಆರ್.ನಗರದ ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಭೀರಕವಾಗಿ ಕೊಲೆ ಮಾಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿದ್ದರು, ಬಳಿಕ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ 

ಪುಷ್ಪ 2 ಸಿನಿಮಾ ವಿವಾದ: ನಟ ಅಲ್ಲು ಅರ್ಜುನ್ ಬಂಧನ..!

 


ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ 'ಪುಷ್ಪ 2' ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.

ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

CLICK HERE SHOP NOW

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.


ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಅಗತ್ಯ ಕ್ರಮ: ಗೃಹ ಸಚಿವ ಪರಮೇಶ್ವರ್

 


ಬೆಳಗಾವಿ : ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್, ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು.

CLICK HERE SHOP NOW

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಮ್ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು.

ಶಾಲಾ-ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ ಡಿಜಿಟಲ್ ಅರಸ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42000 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 11000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ: ಬಿಗ್‌ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅರೆಸ್ಟ್..!

 


ತುಮಕೂರು: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮ ಸಮೀಪದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್ ಮಾಡಿರುವ ಸೈನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

CLICK HERE SHOP NOW

ಇದರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಘಟನೆ ಸಂಬಂಧ BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಡಿ ಮಿಡಿಗೇಶಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರತಾಪ್ ಸೈನ್ಸ್ ಹೆಸರಲ್ಲಿ ಇದೆಂಥಾ ಹುಚ್ಚಾಟ ಮಾಡುತ್ತಿದ್ದಾನೆ ಎಂತಲೂ ಕೆಲ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರಿಗೆ ಸೋಡಿಯಂ ಮೆಟಲ್ ಹಾಕುತ್ತಿದ್ದಂತೆ ಅದು ತಕ್ಷಣ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದಲ್ಲದೇ, ಶಬ್ಧ ಕೂಡ ದೊಡ್ಡ ಪ್ರಮಾಣದಲ್ಲೇ ಕೇಳಿಸಿತ್ತು. ಇದರ ಲೈವ್ ವಿಡಿಯೋವನ್ನು ಪ್ರತಾಪ್ ಹಂಚಿಕೊಂಡಿದ್ದ. ಪ್ರತಾಪ್ ಇದೇನು ಕಿತಾಪತಿಗೆ ಅಂತಾ ಕೆಲ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.



ವಿಶ್ವನಾಥನ್ ಆನಂದ್ ಬಳಿಕ ಇತಿಹಾಸ ನಿರ್ಮಿಸಿದ ಗುಕೇಶ್: ಅತಿ ಕಿರಿಯ ವಯಸ್ಸಿನಲ್ಲೇ ವಿಶ್ವ ಚೆಸ್ ಚಾಂಪಿಯನ್ ಪಟ್ಟ

 


ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ  ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಮತ್ತು 32 ವರ್ಷ ವಯಸ್ಸಿನ ಹಾಲಿ ಚಾಂಪಿಯನ್‌ ಲಿರೆನ್‌ ನಡುವೆ ನಡೆದ 13 ಪಂದ್ಯಗಳು ಡ್ರಾ ಆಗಿದ್ದವು. ಆ ಮೂಲಕ ಇಬ್ಬರೂ ತಲಾ 6.5 ಅಂಕಗಳೊಂದಿಗೆ ಸಮಬಲ ಸಾಧಿಸಿದ್ದರು. 14ನೇ ಗೇಮ್ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ಧಾರೆ.


ಉಡುಪಿ: ಎಸ್ ಎಂ ಕೃಷ್ಣ ನಿಧನಕ್ಕೆ ಪೇಜಾವರ ಶ್ರೀ ಸಂತಾಪ


 ಮಾಜಿ ಸಿಎಂ ಎಸ್‌.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ಸಂತಾಪ ಸೂಚಿಸಿದ್ದಾರೆ.

ಎಸ್‌ಎಂ ಕೃಷ್ಣ ರಾಜ್ಯ ಮತ್ತು ದೇಶಕ್ಕೆ ಉತ್ತಮ ಮಾರ್ಗದರ್ಶನ ಮಾಡಿದವರು ಎಂದು ಸ್ವಾಮೀಜಿ ನೆನಪಿಸಿಕೊಂಡಿದ್ದಾರೆ.

CLICK HERE SHOP NOW

ಪೇಜಾವರ ಮಠ ಮತ್ತು ನಮ್ಮ ಗುರುಗಳ ಮೇಲೆ ಅವರಿಗೆ ವಿಶೇಷ ಅಭಿಮಾನ ಇತ್ತು. ಭಗವಂತ ಅವರ ಆತ್ಮಕ್ಕೆ ಸಕಲ ಬಗೆಯ ಶ್ರೇಯಸ್ಸು ಕರುಣಿಸಲಿ. ಕುಟುಂಬಕ್ಕೆ ವಿಯೋಗ ಸಹಿಸುವ ಸಾಮರ್ಥ್ಯ ಕೊಡಲಿ ಎಂದು ಪ್ರಾರ್ಥಿಸಿದ್ದಾರೆ.

ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ ಸಾವಿರಾರು ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಿ ಜೀವನದ ದಾರಿಯನ್ನು ತೆರೆದಿಡುವಲ್ಲಿ ಅವರ ದೂರದೃಷ್ಟಿಯ ಪಾತ್ರ ಸದಾ ಸ್ಮರಣೀಯ. ಸಜ್ಜನಿಕೆ, ಸಭ್ಯತೆ, ಸದಾಚಾರ ಮತ್ತು ಧರ್ಮ ಸಂಪನ್ನರಾಗಿದ್ದರು ಎಂದು ಹಾಡಿ ಹೊಗಳಿದ್ದಾರೆ. ಕೃಷ್ಣ ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಎಂದು ಸ್ವಾಮೀಜಿ ಪ್ರಕಟಣೆ ಮೂಲಕ ಪ್ರಾರ್ಥಿಸಿದ್ದಾರೆ.


ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಸಮುದಾಯದ ಹೋರಾಟ: ಶಾಸಕ ಯತ್ನಾಳ್ ಪೊಲೀಸ್ ವಶಕ್ಕೆ

 


ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಂಬಂಧ ಬೆಳಗಾವಿಯ ಸುವರ್ಣಸೌಧದ ಎದುರುಗಡೆ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.

CLICK HERE SHOP NOW

ಪ್ರತಿಭಟನೆಯಲ್ಲಿ ಶಾಸಕ ಯತ್ನಾಳ್ ಹಾಗೂ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇನ್ನು ಪೊಲೀಸರು ಲಾಠಿಚಾರ್ಜ್ ಮಾಡಿರುವುದರಿಂದ ಸಿಡಿದೆದ್ದಿರುವ ಹೋರಾಟಗಾರರ ಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಅಡ್ಡಲಾಗಿ ಮಲಗಿ ರಸ್ತೆ ತಡೆ ನಡೆಸಿದ್ದಾರೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 6 ಕಿಲೋ ಮೀಟರ್ ನಷ್ಟು ವಾಹನಗಳು ಸಾಲುಗಟ್ಟಿ ನಿಂತಿವೆ.



ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ: ಕರ್ನಾಟಕದಲ್ಲಿ ಮೂರು ದಿನ ಶೋಕಾಚರಣೆ - ನಾಳೆ ರಾಜ್ಯದಾದ್ಯಂತ ಸರ್ಕಾರಿ ರಜೆ ಘೋಷಣೆ

 


ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.

ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ.

ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.


ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ

 


ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. 2009 ರಿಂದ ಅಕ್ಟೋಬರ್ 2012 ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿ ಮತ್ತು ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . 2004 ರಿಂದ 2008. ಎಸ್‌ಎಂ ಕೃಷ್ಣ ಅವರು ಡಿಸೆಂಬರ್‌ನಿಂದ ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1989 ರಿಂದ ಜನವರಿ 1993. ಅವರು 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. 2023 ರಲ್ಲಿ, ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಲಾಯಿತು.





ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆ: ಶ್ವಾಸಕೋಶಕ್ಕೆ ಹಾನಿ ಸಾಧ್ಯತೆ..!

 


ಮಂಗಳೂರು: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್‌ಪಿಎಲ್‌ ತಂಡ ಮತ್ತು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕ‌ರ್ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ ಎಂದು ತಿಳಿದು ಬಂದಿದೆ.


"ಗುಡ್ಡೆಯಂಗಡಿ" ತುಳು ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್..!

ತುಳು ಚಿತ್ರರಂಗಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಹೊಸಬರ ತಂಡಗಳು ಬರುತ್ತಿವೆ. ಅದರಲ್ಲೂ ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕರು, ತುಳು ಚಿತ್ರರಂಗಕ್ಕೆ ಹೊಸ ಆಲೋಚನೆಗಳನ್ನು ಇಟ್ಟುಕೊಂಡು ಬರುತ್ತಿದ್ದಾರೆ. ರಂಗಭೂಮಿಯಲ್ಲಿ ವರ್ಷಾಂತರಗಳ ಕಾಲ ಪಳಗಿಕೊಂಡಿರುವ ಪ್ರತಿಭಾನ್ವಿತರ ತಂಡವೊಂದು ಚಿತ್ರರಂಗಕ್ಕೆ ಆಗಮಿಸಿದೆ. ಈ ಸಾಲಿಗೆ ಮತ್ತೊಂದು ಚಿತ್ರ" ಗುಡ್ಡೆಯಂಗಡಿ" ಸೇರಿಕೊಂಡಿದೆ.

" ಗುಡ್ಡೆಯಂಗಡಿ" ಶೀರ್ಷಿಕೆಯಲ್ಲಿಯೇ ಕಥೆಯ ಬಗೆಗಿನ ನಿಗೂಢ ಬಚ್ಚಿಟ್ಟುಕೊಂಡಂತಿರುವ ಈ ಚಿತ್ರವನ್ನು ಶಶಿ ಶಿರ್ಲಾಲು ನಿರ್ದೇಶನ ಮಾಡಿದ್ದಾರೆ. ಇದೀಗ ಈ ಚಿತ್ರದ ಟೈಟಲ್ ಟ್ರ್ಯಾಕ್ ದೃಷ್ಟಿ ರೆಕಾರ್ಡ್ಸ್ ತುಳು ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದೆ. ಈ ಮೂಲಕವೇ ಸದರಿ ಚಿತ್ರದ ಬಗ್ಗೆ ನಾನಾ ಆಯಾಮಗಳಲ್ಲಿ ನಿರೀಕ್ಷೆಗಳು ಮೂಡಿಕೊಂಡಿವೆ.

ದೃಷ್ಟಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಎಸ್.ಬಿ.ಕೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇದರ ಪೋಸ್ಟರ್ ಒಂದು ಬಿಡುಗಡೆಗೊಂಡಿತ್ತು. ಆ ಮೂಲಕ ಕುತೂಹಲ ಮೂಡಿಸಿದ್ದ ಚಿತ್ರತಂಡವೀಗ ಟೈಟಲ್ ಟ್ರ್ಯಾಕ್ ಮೂಲಕ ಪ್ರೇಕ್ಷಕರನ್ನು ಮತ್ತಷ್ಟು ತೀವ್ರವಾಗಿ ಸೆಳೆದುಕೊಂಡಿದೆ. ಇದು ಕ್ರೈಂ ಜಾನರಿನ ಚಿತ್ರವಾಗಿದ್ದು, ಒಂದು ಪ್ರಕರಣದ ತನಿಖೆಯ ಸುತ್ತ ಸಾಗುವ ರೋಚಕ ಕಥನದೊಂದಿಗೆ ಇದನ್ನು ರೂಪಿಸಲಾಗಿದೆಯಂತೆ. ಆಗಾಗ ತುಳು ಚಿತ್ರರಂಗದಲ್ಲಿ ಈ ಜಾನರಿನ ಚಿತ್ರಗಳು ತೆರೆಗಾಣುತ್ತಿರುತ್ತವೆ. ಅದೆಲ್ಲಕ್ಕಿಂತಲೂ ಭಿನ್ನವಾದ ಅಂಶಗಳು ಇಲ್ಲಿವೆ ಎಂಬ ತುಂಬು ಭರವಸೆ ಚಿತ್ರತಂಡದಲ್ಲಿದೆ.

ರಂಗಭೂಮಿಯಲ್ಲಿ ಸಕ್ರಿಯವಾಗಿದ್ದುಕೊಂಡು, ವರ್ಷಾಂತರಗಳಿಂದ ತಯಾರಿ ನಡೆಸಿದ್ದ ತಂಡವೊಂದು ಈ ಚಿತ್ರದ ಹಿಂದಿದೆ. ಅವರೆಲ್ಲರೂ ರಂಗಭೂಮಿಗೆ ಹಳಬರಾದರೂ, ಚಿತ್ರರಂಗಕ್ಕೆ ಹೊಸಬರು. ಸಿದ್ಧಸೂತ್ರದಾಚೆಗೆ ಏನೋ ಮಾಡಬೇಕೆಂಬ ತುಡಿತವನ್ನು ಈ ತಂಡ `ಗುಡ್ಡೆಯಂಗಡಿ’ ಚಿತ್ರದ ಮೂಲಕ ಸಾಕಾರಗೊಳಿಸಿದೆಯಂತೆ.

ರಂಗಭೂಮಿಯ ಹಿರಿಯ ಕಲಾವಿದ ಪ್ರೀತಮ್ ಶೆಟ್ಟಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ, ರಂಜಿತ್ ಶಿರ್ಲಾಲು, ಸಂದೀಪ್ ಪೂಜಾರಿ, ಸಂಕೇತ್ ಕುಲಾಲ್, ಹರೀಶ್ ತೂಮಿನಾಡ್ ಪವನ್, ಗಣೇಶ್ ಆಚಾರ್ಯ ಮುಂತಾದವರ ತಾರಾಗಣವಿದೆ. 

ಅನಿಲ್ ಲಕ್ಷ್ಮಣ್ ಉಡುಪಿ ಮತ್ತು ಹರೀಶ್ ಪುತ್ತೂರು ಛಾಯಾಗ್ರಹಣ, ರಂಜಿತ್ ಶಿರ್ಲಾಲು ಸಾಹಿತ್ಯದ ಹಾಡಿಗೆ ಸ್ವಸ್ತಿಕ್ ಕಡಿಯಾಳಿ ಧ್ವನಿಯಾಗಿ, ಮೋಹನ್ ಪಿ ನಾಯರ್ ಸಂಗೀತ ನಿರ್ದೇಶನವನ್ನು ನೀಡಿದ್ದಾರೆ

ಉಡುಪಿ , ಕಾರ್ಕಳ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಟ್ರೈಲರ್ ಬಿಡುಗಡೆಗೊಳಿಸಿ, ಅದಾದ ಬಳಿಕ ಈ ಸಿನಿಮಾ ಬಿಡುಗಡೆ ದಿನಾಂಕ ಘೋಶಣೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.


© all rights reserved
made with by templateszoo