ರಾಜ್ಯ ಉಡುಪಿ Eshwarappa santhoshpateel ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರಾಜ್ಯ ಉಡುಪಿ Eshwarappa santhoshpateel ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್ 20-04-2022

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರು ಸಂತೋಷ್ ಪಾಟೀಲ್ ಮನೆಯನ್ನ ಜಿಪಿಎ (GPA) ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉಡುಪಿ ಪೊಲೀಸರ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. 40 ಲಕ್ಷಕ್ಕೆ ಜಿಪಿಎ ಮಾಡಿಸಿಕೊಂಡ ಬಗ್ಗೆ ಪೊಲೀಸರಿಗೆ ದಾಖಲೆ ಸಿಕ್ಕಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನಾಗೇಶ್ ಮನ್ನೋಳ್ಕರ್, ಕಾಮಗಾರಿ ವ್ಯವಹಾರಕ್ಕೂ ಮನೆ ಜಿಪಿಎ ವಿಚಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಮತ್ತೊಂದೆಡೆ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು. ನೋಂದಣಿ ಮಾಡಿಸಿಕೊಂಡ ದಾಖಲೆಗಳು ನಮ್ಮ ಬಳಿ ಇವೆ. ಯಾವ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಗೊತ್ತಿದೆ. ಸರ್ಕಾರ ಏನು ಮಾಡುತ್ತೋ ಮಾಡಲಿ, ಆಮೇಲೆ ಮಾತಾಡುತ್ತೇವೆ ಅಂತ ಡಿಕೆಶಿ ಹೇಳಿದ್ದಾರೆ.

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಈಚೆಗೆ ಉಪಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಉಡುಪಿ ಪೊಲೀಸರ ವಿಚಾರಣೆಗೆ ಹಾಜರಾಗದ ಇವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಪಾಟೀಲ ಹಲವು ಕಾಮಗಾರಿಗಳನ್ನು ಮಾಡಿಸಿದ್ದರು.
ಕಾಮಗಾರಿ ಮಂಜೂರಾತಿ ಪಡೆಯುವ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಲೆಟರ್ ಹೆಡ್ ಮೂಲಕವೇ ಮೃತ ಸಂತೋಷ್ ಪಾಟೀಲ ಕಾಮಗಾರಿಯ ವಿವರಗಳನ್ನು ಈಶ್ವರಪ್ಪ ಅವರಿಗೆ ಒದಗಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಮೌಖಿಕ ಸೂಚನೆ ಮೇರೆಗೆ ₹ 4.12 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ಮಾಡಿಸಿದ್ದೇನೆ ಎಂದು ಸಂತೋಷ ಪಾಟೀಲ್ ಹೇಳಿದ್ದರು.

*ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ...!*

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮೀಷನ್‌‌ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎನ್ನಲಾಗಿದೆ.


ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಡೆತ್‌ನೋಟ್‌ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅವರಲ್ಲಿ ಅವರು, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆದಿದ್ದಾರೆ.


“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.
ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.


ಗುತ್ತಿಗೆದಾರರಾಗಿದ್ದ ಸಂತೋಷ್ ಪಾಟಿಲ್ ಅವರು ಸಚಿವ ಈಶ್ವರಪ್ಪ ಅವರು 40 ಪರ್ಸಂಟೇಜ್‌‌ ಕಮೀಷನ್‌ ಕೇಳಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಈ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿತ್ತು.
© all rights reserved
made with by templateszoo