ರಾಜ್ಯ State ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರಾಜ್ಯ State ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ (80) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಕೆಲದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಆಸ್ಕರ್ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. 


ಕೆಲದಿನಗಳ ಹಿಂದೆ ಮನೆಯಲ್ಲೇ ಯೋಗ ಮಾಡುವ ಸಂಧರ್ಭ ಆಯಾತಪ್ಪಿ ಬಿದ್ದಿದ್ದಾರೆ ಎನ್ನಲಾಗಿತ್ತು, ಈ ವೇಳೆ ಅವರ ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿತ್ತು , ಆದರೆ ಅವರು ಅದನ್ನು ನಿರ್ಲಕ್ಷಿಸಿ‌ದ್ದರು ಎನ್ನಲಾಗಿದೆ.

ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಡಯಾಲಿಸಿಸ್ ಚಿಕಿತ್ಸೆಗೆ ಎಂದು ತೆರಳಿದ್ದಾಗ ಈ ವಿಷಯ ತಿಳಿದುಬಂದಿತ್ತು. ನಂತರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಆಸ್ಕರ್ ಫೆರ್ನಾಂಡಿಸ್ ಪತ್ನಿ , ಓರ್ವ ಪುತ್ರ , ಪುತ್ರಿಯವರನ್ನ ಅಗಲಿದ್ದಾರೆ.

ಆಸ್ಕರ್ ಫೆರ್ನಾಂಡಿಸ್ ರಾಜಕೀಯ ಹಾದಿ:
ಆಸ್ಕರ್ ಫೆರ್ನಾಂಡಿಸ್ ಅವರಿಗೆ ಮೊದಲಿನಿಂದಲೂ ರಾಜಕೀಯ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಬಹಳ ಆಸಕ್ತಿ ಇತ್ತು. 1972ರಲ್ಲಿ ಉಡುಪಿ ಮುನ್ಸಿಪಲ್ ಕೌನ್ಸಿಲ್‌ನ ಸದಸ್ಯರಾಗುವ ಮೂಲಕ ಅವರ ರಾಜಕೀಯ ಜೀವನ ಆರಂಭವಾಯಿತು. ನಂತರ 1980ರಲ್ಲಿ ಮೊದಲ ಬಾರಿಗೆ ಉಡುಪಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೀಸಿ ಸಂಸದರಾಗ್ತಾರೆ. ನಂತರ 1984, 89,91,96ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗುತ್ತಾರೆ. ನಂತರ ಯು.ಪಿ.ಎ ಸರ್ಕಾರದ ಅವಧಿಯಲ್ಲಿ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ನಂತರ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 1989ರಿಂದ 1999ರ ಅವಧಿಗೆ ಕರ್ನಾಟಕ ರಾಜ್ಯದ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ವರದಿ: UDUPI FIRST




© all rights reserved
made with by templateszoo