ರಾಜ್ಯ Udupifirst corona4thwave ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ರಾಜ್ಯ Udupifirst corona4thwave ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಜನವರಿ 12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 


ಬೆಂಗಳೂರು : ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು.

ಜನವರಿ 19 ರಂದು ಪ್ರಧಾನಿ ಮೋದಿಯವರು ನಾರಾಯಣಪುರದಲ್ಲಿ ಆಗಮಿಸಲಿದ್ದು, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.





ಆಗಸ್ಟ್‌ನಲ್ಲಿ ಕೊರೋನಾ ನಾಲ್ಕನೇ ಅಲೆ:-ಆರೋಗ್ಯ ಸಚಿವ ಡಾ.ಕೆ.ಸುಧಾಕರ್22-3-2022

ಕೋವಿಡ್ ನಾಲ್ಕನೆ ಅಲೆ ಆಗಸ್ಟ್ ವೇಳೆಗೆ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್‍ನ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಕೊರೊನಾದ ರೂಪಾಂತರ ಉಪತಳಿ ಬಿ.ಎ.2 ಮೊದಲು ಫಿಲಿಫೈನ್ಸ್‍ನಲ್ಲಿ ಕಾಣಿಸಿಕೊಂಡಿತ್ತು.

ನಂತರ 40 ದೇಶಗಳಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಮೂರನೆ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಿದ ಸಂಸ್ಥೆಯೇ ನಾಲ್ಕನೆ ಅಲೆಯ ಮುನ್ಸೂಚನೆಯನ್ನು ನೀಡಿದೆ. ಬಹುತೇಕ ಆಗಸ್ಟ್ ನಲ್ಲಿ ಕೋವಿಡ್ ನಾಲ್ಕನೆ ಅಲೆ ಬರುವ ಮುನ್ಸೂಚನೆ ನೀಡಿದೆ ಎಂದು ಹೇಳಿದರು.

ನಮ್ಮಲ್ಲಿ ಲಸಿಕಾ ಅಭಿಯಾನ ಉತ್ತಮವಾಗಿದೆ. ಹಾಗಾಗಿ ನಾಲ್ಕನೆ ಅಲೆ ಎದುರಾದರೂ ಸಾರ್ವಜನಿಕರು ಹೆದರುವ ಅಗತ್ಯ ಇಲ್ಲ. ರಾಜ್ಯದಲ್ಲಿ 1.25 ಕೋಟಿ ಡೋಸ್ ಲಸಿಕೆ ನೀಡಿದೆ. ಬೂಸ್ಟರ್ ಲಸಿಕೆಯನ್ನು ನೀಡಲಾಗುತ್ತಿದೆ. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಲಸಿಕೆ ಕೊಡಿಸಲು ಮಕ್ಕಳ ಪೋಷಕರ ಮನವೋಲಿಸಲಾಗುವುದು ಎಂದು ಹೇಳಿದರು.

ಲಸಿಕಾಕರಣ ಕೋವಿಡ್‍ಅನ್ನು ತಡೆಯುತ್ತದೆ. ಆದರೂ ಕೋವಿಡ್ ತಡೆಯುವ ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸುವುದು ಅಗತ್ಯ ಇದೆ. ಒಳಾಂಗಣದಲ್ಲಿ ಮಾಸ್ಕ ಕಡ್ಡಾಯ ಮಾಡುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಶೀಘ್ರವೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಈ ಬಗ್ಗೆ ನಡೆಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ನಾವು ಈಗಾಗಲೇ ಮೂಲ ಸೌಲಭ್ಯಗಳನ್ನು ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ರಾಜ್ಯದಲ್ಲಿ 55,256 ಆಮ್ಲಜನಕ ಬೆಡ್‍ಗಳನ್ನು ಸ್ಥಾಪಿಸಲಾಗಿದೆ. 300 ಮೆಟ್ರಿಕ್ ಟನ್ ಆಮ್ಲಜನಕದ ಸಾಮಥ್ರ್ಯವನ್ನು, 1270 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಲಾಗಿದೆ. ನಮ್ಮಲ್ಲಿ ಆಮ್ಲಜನಕ ಉತ್ಪಾದನೆ ಮತ್ತು ಸಂಗ್ರಹ ಸಾಮಥ್ರ್ಯ ಬೇಡಿಕೆಗೆ ಅನುಗುಣವಾಗಿದೆ ಎಂದರು.
© all rights reserved
made with by templateszoo