Bangalore ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
Bangalore ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್ 20-04-2022

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರು ಸಂತೋಷ್ ಪಾಟೀಲ್ ಮನೆಯನ್ನ ಜಿಪಿಎ (GPA) ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉಡುಪಿ ಪೊಲೀಸರ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. 40 ಲಕ್ಷಕ್ಕೆ ಜಿಪಿಎ ಮಾಡಿಸಿಕೊಂಡ ಬಗ್ಗೆ ಪೊಲೀಸರಿಗೆ ದಾಖಲೆ ಸಿಕ್ಕಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನಾಗೇಶ್ ಮನ್ನೋಳ್ಕರ್, ಕಾಮಗಾರಿ ವ್ಯವಹಾರಕ್ಕೂ ಮನೆ ಜಿಪಿಎ ವಿಚಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಮತ್ತೊಂದೆಡೆ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು. ನೋಂದಣಿ ಮಾಡಿಸಿಕೊಂಡ ದಾಖಲೆಗಳು ನಮ್ಮ ಬಳಿ ಇವೆ. ಯಾವ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಗೊತ್ತಿದೆ. ಸರ್ಕಾರ ಏನು ಮಾಡುತ್ತೋ ಮಾಡಲಿ, ಆಮೇಲೆ ಮಾತಾಡುತ್ತೇವೆ ಅಂತ ಡಿಕೆಶಿ ಹೇಳಿದ್ದಾರೆ.

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಈಚೆಗೆ ಉಪಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಉಡುಪಿ ಪೊಲೀಸರ ವಿಚಾರಣೆಗೆ ಹಾಜರಾಗದ ಇವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಪಾಟೀಲ ಹಲವು ಕಾಮಗಾರಿಗಳನ್ನು ಮಾಡಿಸಿದ್ದರು.
ಕಾಮಗಾರಿ ಮಂಜೂರಾತಿ ಪಡೆಯುವ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಲೆಟರ್ ಹೆಡ್ ಮೂಲಕವೇ ಮೃತ ಸಂತೋಷ್ ಪಾಟೀಲ ಕಾಮಗಾರಿಯ ವಿವರಗಳನ್ನು ಈಶ್ವರಪ್ಪ ಅವರಿಗೆ ಒದಗಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಮೌಖಿಕ ಸೂಚನೆ ಮೇರೆಗೆ ₹ 4.12 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ಮಾಡಿಸಿದ್ದೇನೆ ಎಂದು ಸಂತೋಷ ಪಾಟೀಲ್ ಹೇಳಿದ್ದರು.

ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಕಾರು ಅಪಘಾತ :-ಬೆಂಗಳೂರು ಘಟನೆ ಮಾಸುವ ಮುನ್ನವೇ ಮತ್ತೊಂದು ಕಾರ್ ಆಕ್ಸಿಡೆಂಟ್

ಬೆಂಗಳೂರು: ತಮಿಳುನಾಡು ಡಿಎಂಕೆ ಶಾಸಕ ವೈ. ಪ್ರಕಾಶ್​ ಪುತ್ರನ ಕಾರು ಅಪಘಾತ ಮಾಸುವ ಮುನ್ನವೇ ಮತ್ತೊಂದು ಹೈಎಂಡ್ ಕಾರು ಅಪಘಾತ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಡಿಕ್ಕಿಯ ರಭಸಕ್ಕೆ‌ ಫೆರಾರಿ ಕಾರಿನಲ್ಲಿದ್ದ ಏರ್ ಬ್ಯಾಗ್​ಗಳು ಓಪನ್ ಆಗಿದ್ದರಿಂದ ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.
ವಿಧಾನ ಪರಿಷತ್ ಸದಸ್ಯ ಬಿ.ಎಂ ಫಾರೂಖ್ ಒಡೆತನಕ್ಕೆ ಸೇರಿದ್ದಾಗಿದೆ. ಯಲಹಂಕ ಫ್ಲೈ ಓವರ್ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಏರ್ಪೋಟ್​ ಕಡೆಯಿಂದ ಯಲಹಂಕ ಕಡೆಗೆ ಕಾರು ಬರುತ್ತಿತ್ತು. ಆದ್ರೆ ಕಾರು ಚಲಾಯಿಸುತ್ತಿದ್ದವರು ಯಾರು ಎಂಬುದರ ಬಗ್ಗೆ ಪೊಲೀಸರು ಈವರೆಗೂ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇನ್ನು ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತವಾದ ಬಳಿಕ ಕೇಸ್ ದಾಖಲಿಸದ ಪೊಲೀಸರು ಕಾರು ಸಮೇತ ಅದರಲ್ಲಿದ್ದವರನ್ನು ಬಿಟ್ಟು ಕಳಿಸಿದ್ದಾರೆ.
ಫೆರಾರಿ ಕಾರು ಮುಂಬದಿಯ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಫೆರಾರಿ ಕಾರನ್ನು ಹೆಚ್ಚಾಗಿ ಬಿ.ಎಂ. ಫಾರೂಖ್ ಪುತ್ರಿ ಬಳಸುತ್ತಿದ್ರು. ಘಟನೆ ಬಳಿಕ ಪರಸ್ಪರ ರಾಜಿಯೊಂದಿಗೆ ಎರಡು ಕಾರಿನ ಚಾಲಕರು ವಾಪಾಸಾಗಿರುವ ಬಗ್ಗೆ ಮಾಹಿತಿ ಇದೆ. ಕಳೆದ ತಿಂಗಳಷ್ಟೇ ಅಪಘಾತವಾದ ಫೆರಾರಿ ಕಾರನ್ನು ಆರ್​ಟಿಒ ಅಧಿಕಾರಿಗಳು ಸೀಜ್ ಮಾಡಿದ್ದರು. ಕಾರಿನ ನೊಂದಣಿ ಪ್ರಕ್ರಿಯೆ ಅಪೂರ್ಣವಾಗಿರುವ ಹಿನ್ನೆಲೆ ಕಾರನ್ನ ಸಿಜ್ ಮಾಡಲಾಗಿತ್ತು. ಕಾರಿನ ದಾಖಲೆಗಳನ್ನು ಪರಿಶೀಲನೆ ನಡೆಸಿ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು.
ವರದಿ:-UDUPI FIRST
© all rights reserved
made with by templateszoo