ಕಾರ್ಕಳ : ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುವುದು ಕಂಡುಬರುತಿದ್ದು, ಈ ಕೃತ್ಯವನ್ನು ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾತ್ರಿ ವೇಳೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು, ಚೆಕ್‌ಪೋಸ್ಟ್ ಗಳಲ್ಲಿ ನಿಗಾ ಇರಿಸಬೇಕು. ಈ ಹಿಂದೆ ಗೋಕಳ್ಳತನದಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆಸಿ ತನಿಖೆ ನಡೆಸುವುದು, ಶಂಕಿತ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕು ಎಂದು ಸೂಚಿಸಿದರು.
ಇನ್ನುಮುಂದೆ ಜಿಲ್ಲೆಯಲ್ಲಿ ಗೋಕಳ್ಳತನದಂತಹ ಕೃತ್ಯ ಗಳು ನಡೆಯದಂತೆ ನಿಗಾವಹಿಸಬೇಕು. 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಹತೋಟಿಗೆ ತರಬೇಕು ಎಂದು ಸೂಚನೆ ನೀಡಿದ್ದಾರೆ.