kundapuara ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
kundapuara ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್ 20-04-2022

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಅವರು ಸಂತೋಷ್ ಪಾಟೀಲ್ ಮನೆಯನ್ನ ಜಿಪಿಎ (GPA) ಮಾಡಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಉಡುಪಿ ಪೊಲೀಸರ ತನಿಖೆಯ ವೇಳೆ ಮಾಹಿತಿ ಲಭ್ಯವಾಗಿದೆ. 40 ಲಕ್ಷಕ್ಕೆ ಜಿಪಿಎ ಮಾಡಿಸಿಕೊಂಡ ಬಗ್ಗೆ ಪೊಲೀಸರಿಗೆ ದಾಖಲೆ ಸಿಕ್ಕಿದೆ. ಈ ಬಗ್ಗೆ ಹೇಳಿಕೆ ನೀಡಿರುವ ನಾಗೇಶ್ ಮನ್ನೋಳ್ಕರ್, ಕಾಮಗಾರಿ ವ್ಯವಹಾರಕ್ಕೂ ಮನೆ ಜಿಪಿಎ ವಿಚಾರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಮತ್ತೊಂದೆಡೆ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಜಿಪಿಎ ಅಷ್ಟೇ ಅಲ್ಲಾ ಬೇರೆ ಎಲ್ಲಾ ಮಾಹಿತಿ ನಮ್ಮ ಬಳಿ ಇದೆ ಅಂತ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಂತೋಷ್ ಕರೆದೊಯ್ದಿರುವುದು. ನೋಂದಣಿ ಮಾಡಿಸಿಕೊಂಡ ದಾಖಲೆಗಳು ನಮ್ಮ ಬಳಿ ಇವೆ. ಯಾವ ಆಸ್ತಿಯನ್ನು ನೋಂದಣಿ ಮಾಡಿಸಿಕೊಂಡಿದ್ದಾರೆಂದು ಗೊತ್ತಿದೆ. ಸರ್ಕಾರ ಏನು ಮಾಡುತ್ತೋ ಮಾಡಲಿ, ಆಮೇಲೆ ಮಾತಾಡುತ್ತೇವೆ ಅಂತ ಡಿಕೆಶಿ ಹೇಳಿದ್ದಾರೆ.

ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಈಚೆಗೆ ಉಪಗುತ್ತಿಗೆದಾರರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಉಡುಪಿ ಪೊಲೀಸರ ವಿಚಾರಣೆಗೆ ಹಾಜರಾಗದ ಇವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಪಾಟೀಲ ಹಲವು ಕಾಮಗಾರಿಗಳನ್ನು ಮಾಡಿಸಿದ್ದರು.
ಕಾಮಗಾರಿ ಮಂಜೂರಾತಿ ಪಡೆಯುವ ವೇಳೆ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಲೆಟರ್ ಹೆಡ್ ಮೂಲಕವೇ ಮೃತ ಸಂತೋಷ್ ಪಾಟೀಲ ಕಾಮಗಾರಿಯ ವಿವರಗಳನ್ನು ಈಶ್ವರಪ್ಪ ಅವರಿಗೆ ಒದಗಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡಿದ್ದರು. ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ಮೌಖಿಕ ಸೂಚನೆ ಮೇರೆಗೆ ₹ 4.12 ಕೋಟಿ ವೆಚ್ಚದಲ್ಲಿ 108 ಕಾಮಗಾರಿ ಮಾಡಿಸಿದ್ದೇನೆ ಎಂದು ಸಂತೋಷ ಪಾಟೀಲ್ ಹೇಳಿದ್ದರು.

ಸಮಾಜದ ಅಭಿವೃದ್ಧಿಯಲ್ಲಿ ಉತ್ತಮ ಮನಸ್ಸು ಅಗತ್ಯ"...ಬಿ.ಅಪ್ಪಣ್ಣ ಹೆಗ್ಡೆ. 14-3-2022

"ಸಮಾಜದ ಅಭಿವೃದ್ಧಿಯಲ್ಲಿ ಉತ್ತಮ ಮನಸ್ಸು ಅಗತ್ಯ"...ಬಿ.ಅಪ್ಪಣ್ಣ ಹೆಗ್ಡೆ.   
  
            ಜನರು ಶೈಕ್ಷಣಿಕ, ಧಾರ್ಮಿಕ,ಆರ್ಥಿಕ  ಪ್ರಗತಿ ಸಾಧಿಸುವ ಸದುದ್ದೇಶ ಗ್ರಾಮಾಭಿವೃದ್ದಿ ಯೋಜನೆಯದ್ದು. ಗ್ರಾಮಾಭಿವೃದ್ದಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾಲಂಬನೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ  ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಿರುವುದು ಸಂತೋಷದ ವಿಚಾರವಾಗಿದೆ. ನಮ್ಮ ಮನಸ್ಸು ಸುಸ್ಥಿತಿಯಲ್ಲಿರಬೇಕು, ಆಗ ಸಮಾಜದ ಅಭಿವೃದ್ಧಿ ಕೂಡ ಸಾಧ್ಯ" ಎಂದು ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿರುವ ಶ್ರೀ. ಬಿ.ಅಪ್ಪಣ್ಣ ಹೆಗ್ಡೆಯವರು ಕೊರ್ಗಿ  ಶ್ರೀಮತಿ ಗಿರಿಜಾ ಚಂದ್ರಶೇಖರ ಹೆಗ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರ್ಗಿಯಲ್ಲಿ   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಕಾಳಾವರ ವಲಯದ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
             ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ  ಶ್ರೀ.ಕ್ಷೇ.ಧ. ಗ್ರಾ.ಯೋ ಕುಂದಾಪುರ ತಾಲೂಕಿನ ಹಿರಿಯ ಯೋಜನಾಧಿಕಾರಿ  ಮುರುಳೀಧರ ಕೆ ಶೆಟ್ಟಿಯವರು ಮಾತನಾಡಿ ಕೊರೊನಾ ಕಾಲದಲ್ಲಿ ಕೂಡ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳು ಚಲನಶೀಲವಾಗಿತ್ತು. ಯೋಜನೆಯ ಸದಸ್ಯರು ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಸಿಗುವ ಎಲ್ಲ ಸೌಲಭ್ಯಗಳು ಸದುಪಯೋಗಪಡಿಸಿ ಕೊಳ್ಳಬೇಕು ,ಆಗ  ಮಾತ್ರ ಸ್ವಸಹಾಯ ಸಂಘದ ಸದಸ್ಯರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ " ಎಂದರು.  
                 ವಿಶೇಷ ಧಾರ್ಮಿಕ ಉಪನ್ಯಾಸ  ನೀಡಿರುವ  ಬ್ರಹ್ಮಾವರ ಪಿ.ಯು ಕಾಲೇಜಿನ ಕನ್ನಡ ಉಪನ್ಯಾಸಕ ಅಲ್ತಾರು ನಾಗರಾಜ್  ಮಾತನಾಡಿ "ಒಳ್ಳೆಯದ್ದು , ಕೆಟ್ಟದ್ದು ಮನುಷ್ಯ ಸಹಜ ಗುಣ. ಕೆಟ್ಟತನವನ್ನು ಹೋಗಲಾಡಿಸಲು  ಮನೆ - ಮನೆಗಳಲ್ಲಿಯೂ ಭಜನೆಯ ಮುಖೇನ  ಧಾರ್ಮಿಕತೆಯ ಮನೋಭಾವ ಬೆಳೆಯಬೇಕಿದೆ. ಧಾರ್ಮಿಕ ಚಿಂತನೆಗಳು, ಧ್ಯಾನಗಳು ನಮಗೆ ಹುಮ್ಮಸ್ಸು ನೀಡುತ್ತದೆ.  ಸದಾ ಒಳ್ಳೆಯ ಮಾತುಗಳು ,  ಒಳಿತನ್ನು ಯೋಚಿಸುವ ಮನೋಭಾವ ನಮ್ಮದಾಗಿರಲಿ" ಎಂದರು* .                                                ಇದೇ ವೇಳೆಯಲ್ಲಿ  ಗ್ರಾಮಾಭಿವೃದ್ದಿ ಯೋಜನೆಯ ಮಹತ್ವಾಕಾಂಕ್ಷಿ ಯೋಜನೆಗಳಾದ ಸೆಲ್ಕೊ ಸೋಲಾರ್, ಕುಕ್ ಸ್ಟವ್, ಮೈಕ್ರೋ ಬಚತ್, ಈ ಶ್ರಮ ಕಾರ್ಡ್ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.
      ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಳಾವರ ಗ್ರಾ.ಪಂ ಮಾಜಿ ಅಧ್ಯಕ್ಷರಾದ ರೋ.ರಂಜಿತ್ ಕುಮಾರ್ ಶೆಟ್ಟಿ, ಶ್ರೀಮತಿ ಗಿರಿಜಾ ಚಂದ್ರಶೇಖರ್ ಹೆಗ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋ ಪಾಧ್ಯಯರಾದ ಜಯಕರ ಹೆಗ್ಡೆ, ಸತ್ಯನಾರಾಯಣ ಪೂಜೆಯ ಧಾರ್ಮಿಕ ವಿಧಿ ವಿಧಾನದ ನೇತೃತ್ವ ವಹಿಸಿದ್ದ ಮಂಜುನಾಥ್ ಕಲ್ಕೂರ್ , ಹೆಸ್ಕುತ್ತೂರು ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ  ಉಪಸ್ಥಿತರಿದ್ದರು.
     ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊರ್ಗಿ ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಭಂಡಾರಿ ವಹಿಸಿದ್ದರು.
        ಕಾರ್ಯಕ್ರಮದಲ್ಲಿ ಕಾಳಾವರ ವಲಯದ ಮೇಲ್ವಿಚಾರಕ  ದೀಪಕ್ ಕುಮಾರ್, ವಲಯದ ಎಲ್ಲ ಒಕ್ಕೂಟಗಳ ಸೇವಾ ಪ್ರತಿನಿಧಿಗಳು,ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು,ನವಜೀವನ ಸಮಿತಿ ಸದಸ್ಯರು , ಕೊರ್ಗಿ ಮತ್ತು ಹೆಸ್ಕುತ್ತೂರು ಒಕ್ಕೂಟದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಪದಾಧಿಕಾರಿಗಳು ,ಸರ್ವ ಸದಸ್ಯರು ಉಪಸ್ಥಿತರಿದ್ದರು.
          ವಲಯಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಾಧನೆ ಮಾಡಿರುವ  ವಲಯದ ಸೇವಾಪ್ರತಿನಿಧಿಯವರನ್ನು ಅಭಿನಂದಿಸಲಾಯಿತು. 
 ಕಾಳಾವರ ವಲಯದ ಮೇಲ್ವಿಚಾರಕ ದೀಪಕ್ ಕುಮಾರ್  ವಲಯದ ಸಾಧನಾ ವರದಿ ಮಂಡಿಸಿ,ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು.
         ನವ್ಯಶ್ರೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ,ರಾಜು ಕುಲಾಲ್ ಸ್ವಾಗತಿಸಿದರು. ತಾಲೂಕಿನ ಕೃಷಿ ಅಧಿಕಾರಿ ಚೇತನ್ ಕುಮಾರ್ ಧನ್ಯವಾದ ವಿತ್ತರು.
© all rights reserved
made with by templateszoo