managalore ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
managalore ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸುಬ್ರಹ್ಮಣ್ಯ:-ಅನ್ಯ ಕೋಮಿನ ಯುವಕನೊಂದಿಗೆ ಅರಣ್ಯ ಪ್ರದೇಶದಲ್ಲಿ ಯುವತಿ ಪತ್ತೆ 5-4-2022

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪ ಅನ್ಯಕೋಮಿನ ಯುವಕನೊಂದಿಗೆ ಯುವತಿ ಗುಂಡ್ಯ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅರಣ್ಯ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಸ್ಥಳೀಯರಿಗೆ ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. 

ಈ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅನ್ಯಕೋಮಿನ ಯುವಕನೊಂದಿಗೆ ಯುವತಿ ಕಾಡಿನಲ್ಲಿ ಏಕಾಂತದಲ್ಲಿರುವುದನ್ನು ಗಮನಿಸಿದ ಸ್ಥಳೀಯರು ಪತ್ತೆ ಹಚ್ಚಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನು ವಶಕ್ಕೆ ಪಡೆದರೆನ್ನಲಾಗುತ್ತಿದೆ.

ಯುವಕ ಪುತ್ತೂರು ನಿವಾಸಿಯಾಗಿದ್ದು ಆಟೋ ಚಾಲಕನಾಗಿದ್ದಾನೆ. ಯುವತಿ ವೇಣೂರಿನವಳು ಎಂದು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸದ್ಯ ಪೊಲೀಸರು ಈ ಜೋಡಿಗಳ ಕುರಿತು ಇನ್ನಷ್ಟು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
© all rights reserved
made with by templateszoo