ಸಿಟಿ ರವಿಗೆ ಬಿಗ್ ರಿಲೀಫ್..! ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಆದೇಶ

 


ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ನೀಡಿದೆ.

ತಮ್ಮ ಮೇಲಿರುವ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಅವರು ಸಲ್ಲಿಸಿದ್ದ ಅರ್ಜಿ ವಿವಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ಜಿ ಉಮಾ ಅವರಿದ್ದ ಪೀಠವು, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದೆ.

ಸಿಟಿ ರವಿ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು, ಪೊಲೀಸರು ಬಂಧನಕ್ಕೂ ಮುನ್ನ ಸಿ.ಟಿ ರವಿ ಅವರಿಗೆ ಯಾವುದೇ ನೋಟಿಸ್ ನೀಡಿಲ್ಲ. ಸಿ.ಟಿ ರವಿ ಬಂಧನವೇ ಕಾನೂನು ಬಾಹಿರವಾಗಿದೆ. ಹೀಗಾಗಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ವಾದಿಸಿದರು.



ಉಡುಪಿ: ಹೆಚ್ಚುವರಿ ನರ್ಮ್ ಬಸ್ ಮಂಜೂರು ಮಾಡುವಂತೆ ಶಾಸಕ ಯಶ್ಪಾಲ್ ಸುವರ್ಣ ಮನವಿ

 


ಉಡುಪಿ ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ ಹೆಚ್ಚುವರಿ ನರ್ಮ್ ಬಸ್ ಅಗತ್ಯವಿದ್ದು, ಕೊರೊನಾ ಸಂದರ್ಭದಲ್ಲಿ ಸೇವೆಯಿಂದ ಸ್ಥಗಿತಗೊಳಿಸಿರುವ 13 ರೂಟುಗಳ ಬಸ್ ಸೇವೆ ಪುನರಾರಂಭ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬೆಳಗಾವಿ ಅಧಿವೇಶನದಲ್ಲಿ ಮನವಿ ಮಾಡಿದರು.

ಉಡುಪಿಯಲ್ಲಿ ಸುಮಾರು 9-10 ವರ್ಷಗಳ ಹಿಂದೆ ನರ್ಮ್ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಲಾಗಿದ್ದು ಪ್ರಾರಂಭದಲ್ಲಿ 45 ನರ್ಮ್ ಬಸ್‌ಗಳು 33 ಮಾರ್ಗಗಳಲ್ಲಿ ಕಾರ್ಯಾಚರಿಸುತ್ತಿದ್ದವು. ಕೊರೋನಾ ಸಂದರ್ಭದಲ್ಲಿ ಈ ಬಸ್ಸುಗಳ ಓಡಾಟ ವನ್ನು ಸಾಂಕ್ರಾಮಿಕ ರೋಗ ಪ್ರಸರಣ ತಡೆಯ ಕಾರಣಕ್ಕಾಗಿ ಮಾರ್ಗಸೂಚಿಯಂತೆ ನಿಲ್ಲಿಸಲಾಗಿತ್ತು. ಕೊರೋನಾ ಬಳಿಕ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ 20 ರೂಟ್ ಗಳಲ್ಲಿ 32 ಬಸ್ಸುಗಳು ಓಡಾಟ ನಡೆಸುತ್ತಿವೆ. 

45 ಬಸ್ಸುಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಮಂಜೂರಾಗಿದ್ದು, ಈಗಿನ ಬೇಡಿಕೆಯಂತೆ ಸಾರ್ವಜನಿಕರ ಅನುಕೂಲಕ್ಕಾಗಿ ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕಾದ ಅಗತ್ಯವಿದೆ. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯ ದಾಗಿದ್ದು, ಆಗಾಗ ಮಾರ್ಗ ಮಧ್ಯೆ ಕೆಟ್ಟು ನಿಲ್ಲುತ್ತಿರುವ ಘಟನೆಗಳು ಸಂಭವಿಸುತ್ತಿದೆ. ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆಯೂ ಇದೆ. ಉಡುಪಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಕಾರ್ಮಿಕ ವರ್ಗಕ್ಕೆ ಉತ್ತಮ ಸರಕಾರಿ ಬಸ್ ಸೇವೆ ನೀಡುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಮಂಜೂರು ಮಾಡಿ ಸಹಕರಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಸಿಟಿ ರವಿ ಬಂಧನ ಖಂಡಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ

 


ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಬಿಜೆಪಿ ಕರೆ ನೀಡಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಶುಕ್ರವಾರ ಬಂದ್ ಕರೆ ನೀಡಲಾಗಿದೆ. ಜಿಲ್ಲಾ ಬಿಜೆಪಿ ಮುಖಂಡರು ಸಿ.ಟಿ. ರವಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಧುರಾಜ್ ಅರಸ್ ಮನವಿ ಮಾಡಿದ್ದಾರೆ.



ಆಕ್ಷೇಪಾರ್ಹ ಪದಬಳಕೆ ಆರೋಪ: ಮಾಜಿ ಸಚಿವ ಸಿಟಿ ರವಿ ಬಂಧನ


 ವಿಧಾನ ಪರಿಷತ್ ಕಲಾಪ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.

ಕಲಾಪದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ದ ಸಿಟಿ ರವಿ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮಧ್ಯಾಹ್ನ 1 ಗಂಟೆಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಮತ್ತು 79ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 'ಸಿ.ಟಿ. ರವಿ ಅವರು ತಮ್ಮ ಕಡೆಗೆ ನುಗ್ಗಿ ಬಂದು ಸುಮಾರು 10 ಬಾರಿ ಆ 'ಆಕ್ಷೇಪಾರ್ಹ' ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಕೂಡ ಮಾಡಿ, ಮಾನಭಂಗ ಮಾಡಿದ್ದಾರೆ' ಎಂದೂ ದೂರಿನಲ್ಲಿ ಬರೆಯಲಾಗಿದೆ.

ಇದೀಗ ಹಿರೇಬಾಗೇವಾಡಿ ಪೊಲೀಸರು ಸುವರ್ಣ ಸೌಧದಲ್ಲೇ ಧರಣಿ ಕುಳಿತಿದ್ದ ಸಿಟಿ ರವಿ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದ ಪೊಲೀಸರು, ಜೀಪಿನಲ್ಲಿ ಹತ್ತಿಸಿ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು



ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ..? ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್


 ಸಿಟಿ ರವಿ ಅವರು ತನ್ನ ವಿರುದ್ಧ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಅಮಿತ್‌ ಶಾ ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ ಇಂದು ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಭಾಪತಿ ಕಲಾಪ ಮುಂದೂಡಿದ ವೇಳೆ ಅ ಪದ ಬಳಕೆ ಮಾಡಿದ್ದಾರೆ. ಹತ್ತು ಬಾರಿ ಸಿಟಿ ರವಿ ಆ ಪದವನ್ನು ಬಳಕೆ ಮಾಡಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ದೂರಿದರು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದರು. ನಂತರ ಸ್ಪೀಕರ್‌ ಹೊರಟ್ಟಿ ಕಚೇರಿಗೆ ತೆರಳಿದ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಟಿ ರವಿ ಸದಸ್ಯತ್ವ ರದ್ದು ಮಾಡುವಂತೆ ದೂರು ನೀಡಿದರು. ದೂರು ಸ್ವೀಕರಿಸಿದ ಸ್ಪೀಕರ್‌ ವಿಡಿಯೋ ಪರಿಶೀಲಿಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಬಿಜೆಪಿ ಸಂಸದರ ಮೇಲೆ ರಾಹುಲ್ ಗಾಂಧಿ ಹಲ್ಲೆ..? ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

 


ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರ ಪ್ರತಿಭಟನೆ ವೇಳೆ ನಡೆದ ಘರ್ಷಣೆ ಸಂಬಂಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರು ದೊಡ್ಡ ಆರೋಪ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಸಂಸತ್ ಸ್ಟ್ರೀಟ್ ಠಾಣೆಯಲ್ಲಿ ಬಿಜೆಪಿ ಸಂಸದರು ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಅವರ ತಳ್ಳುವಿಕೆಯಿಂದ ಸಂಸತ್ತಿನಲ್ಲಿ ಬಿದ್ದು ತಲೆಗೆ ಗಾಯವಾಗಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಹೇಳಿದ್ದಾರೆ. ನನ್ನ ಮೇಲೆ ಬಿದ್ದ ಸಂಸದರನ್ನು ರಾಹುಲ್ ಗಾಂಧಿ ತಳ್ಳಿದರು, ನಂತರ ನಾನು ಕೆಳಗೆ ಬಿದ್ದೆ… ನಾನು ಮೆಟ್ಟಿಲುಗಳ ಬಳಿ ನಿಂತಿದ್ದಾಗ ರಾಹುಲ್ ಗಾಂಧಿ ಬಂದು ನನ್ನ ಮೇಲೆ ಬಿದ್ದ ಸಂಸದನನ್ನು ತಳ್ಳಿದರು. ಮೇಲೆ ಬಿದ್ದರು," ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದೆ.






ನಾಳೆಯಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭ

 


ನಾಳೆಯಿಂದ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಡಿಸೆಂಬರ್ 20,21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿದೆ..

ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬಂಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

CLICK HERE SHOP NOW

ಮಂಡ್ಯ ಜಿಲ್ಲೆಗೆ ಕೊಡುಗೆ ನೀಡಿದ ಮಹನೀಯರ ಕುರಿತು", ಕನ್ನಡ ನಾಡಿನ ಜಲ ನೆಲ ಸಾಕ್ಷರತೆಯ ಕುರಿತು ಅವಲೋಕನ, "ಸಾಹಿತ್ಯದಲ್ಲಿ ರಾಜಕೀಯ - ರಾಜಕೀಯದಲ್ಲಿ ಸಾಹಿತ್ಯ" ಕರ್ನಾಟಕ 50 ಹಿನ್ನೋಟ- ಮುನ್ನೋಟ, ಕರ್ನಾಟಕದ ಮೌಖಿಕ ಪರಂಪರೆಗಳ ಪ್ರದರ್ಶನ ಮತ್ತು ವಿವರಣೆ, ಸಮ್ಮೇಳನ ಅಧ್ಯಕ್ಷರ ಜೊತೆಗೆ ಸಂವಾದ, ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗ್ಗೆ, ಸರಕಾರಿ ಶಾಲೆಗಳ ಸಬಲೀಕರಣ ಹೀಗೆ ಹತ್ತು ಹಲವು ವಿಷಯದಲ್ಲಿ ವಿಚಾರಗೋಷ್ಠಿ ಯೋಜನೆಗೊಂಡಿವೆ.

ನಾಲ್ಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, 83 ಕವಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ವಿಶೇಷವಾಗಿ ಅಂಧರ ಕವಿಗೋಷ್ಠಿ ಏರ್ಪಡಿಸಲಾಗಿದ್ದು 10 ಮಂದಿ ಅಂದ ಕವಿಗಳು ಕವನವಾಚನ ಮಾಡಲಿದ್ದಾರೆ. ಮಹಿಳಾ ಕವಿಗಳ ಕವಿಗೋಷ್ಠಿ ನಡೆಯಲಿದೆ. 87ನೇ ಸಾಹಿತ್ಯ ಸಮ್ಮೇಳನವಾದ್ದರಿಂದ 87 ಸಾಧಕರನ್ನು ಮತ್ತು ಕರ್ನಾಟಕ ಸುವರ್ಣ ಸಂಭ್ರಮದ ಕುರಿತು 50 ಸಾಧಕರನ್ನು ಒಟ್ಟಾಗಿ 137 ಸಾಧಕರನ್ನು ಸನ್ಮಾಲಿಸಲಾಗುತ್ತಿದೆ.



ಮುಂಬೈ ಗೇಟ್‌ವೇ ಬಳಿ ಪ್ಯಾಸೆಂಜರ್ ಬೋಟ್‌ಗೆ ನೌಕಾ ಹಡಗು ಢಿಕ್ಕಿ: 13ಜನ ಸಾವು

 


ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು 13 ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈ ಬಂದರಿನಲ್ಲಿ ಇಂಜಿನ್ ಟ್ರಯಲ್ಸ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಭಾರತೀಯ ನೌಕಾಪಡೆಯ ನೌಕೆ ನಿಯಂತ್ರಣ ಕಳೆದುಕೊಂಡು ಪ್ಯಾಸೆಂಜರ್ ಬೋಟ್ ಗೆ ಡಿಕ್ಕಿ ಹೊಡೆದಿದೆ.

CLICK HERE SHOP NOW

ಪ್ರಯಾಣಿಕರ ಬೋಟ್ ಗೆ ಡಿಕ್ಕಿ ಹೊಡೆದು ದೋಣಿ ಮಗುಚಿದೆ. ಸಮುದ್ರದಲ್ಲಿ ಮುಳುಗಿ 13 ಜನ ಸಾವನ್ನಪ್ಪಿದ್ದಾರೆ. 101 ಜನರನ್ನು ರಕ್ಷಣೆ ಮಾಡಲಾಗಿದೆ. 4 ಸೇನಾ ಹೆಲಿಕಾಪ್ಟರ್ ಗಳು, 11 ನೌಕಾ ಕ್ರಾಫ್ಟ್ ಗಳು, 1 ಕೋಸ್ಟ್ ಗಾರ್ಡ್ ನೌಕೆಯಿಂದ ಕಾರ್ಯಾಚರಣೆ ನಡೆಸಲಾಗಿದೆ.

ದೋಣಿ ಮಗುಚಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ., ಮೃತರಲ್ಲಿ ಹತ್ತು ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ದ್ವೀಪಕ್ಕೆ ದೋಣಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.



ಜನವರಿ 10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಬಳಕೆಗೆ ಅನುವು ಮಾಡಿಕೊಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

 

ಉಡುಪಿ: : ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

CLICK HERE SHOP NOW

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು 2018 ರಿಂದಲೇ ಕಾಮಗಾರಿಗಳನ್ನು ಕೈಗೊಳ್ಳಲು ಪತ್ರ ವ್ಯವಹಾರಗಳು ನಡೆದಿದ್ದವು, ಕಳೆದ ಮೂರು ವರ್ಷದಿಂದ ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡಿದ್ದರೂ ಸಹ ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದರಿಂದ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ವ್ಯತ್ಯಯ ಉಂಟಾಗಿ ಪ್ರತೀ ದಿನವೂ ಜಿಲ್ಲಾಡಳಿತಕ್ಕೆ ದೂರುಗಳು ಕೇಳಿ ಬರುತ್ತಿವೆ. ಹಾಗೂ ಅಪಘಾತಗಳು ಸಹ ಕಾಮಗಾರಿಯ ವಿಳಂಬದಿಂದಾಗಿ ಉಂಟಾಗಿವೆ. ಇವಕ್ಕೆಲ್ಲಾ ಅಭಿಯಂತರರುಗಳು, ಗುತ್ತಿಗೆದಾರರೇ ಕಾರಣ ಎಂದು ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಪ್ರತೀ ವಾರಕ್ಕೊಮ್ಮೆ ಕಾಮಗಾರಿ ಪ್ರಕ್ರಿಯೆಯ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಿದರು.

 ಮೇಲ್ಸೇತುವೆ ಕಾಮಗಾರಿಯನ್ನು ಕೈಗೊಳ್ಳಲು ಈಗಾಗಲೇ ರೈಲ್ವೆ ಇಲಾಖೆಯ ವತಿಯಿಂದ ಅನುಮತಿಯನ್ನು ನೀಡಲಾಗಿದ್ದು, ಸಿವಿಲ್ ಕಾಮಗಾರಿ ಹಾಗೂ ಕಬ್ಬಿಣದ ಬ್ರಿಡ್ಜ್ನ ಜೋಡಣೆ ಕಾಮಗಾರಿಗಳನ್ನು ಹಗಲು ಹಾಗೂ ರಾತ್ರಿ ಎರಡು ಪಾಳಯದಲ್ಲಿ ಕಾರ್ಮಿಕರನ್ನು ನಿಯೋಜಿಸಿ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಕಾಮಗಾರಿಯನ್ನು ಕೈಗೊಳ್ಳುವಾಗ ಸುರಕ್ಷತೆಗೆ ಆದ್ಯತೆಯನ್ನು ನೀಡಬೇಕು. ರೈಲು ಸಾಗಾಣಿಕೆಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದ ಅವರು ಜನವರಿ 7 ರ ಒಳಗಾಗಿ ಪೂರ್ಣ ಪ್ರಮಾಣದಲ್ಲಿ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಂುರ್ ಇಂಜಿನಿಯರ್ ಗೋಪಾಲ ಕೃಷ್ಣ, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು

ಉಡುಪಿ: ಬೈಕ್ ವೀಲಿಂಗ್: ಸವಾರನ ವಿರುದ್ಧ ಪ್ರಕರಣ ದಾಖಲು

 


ಉಡುಪಿ: ಅಂಬಲಪಾಡಿ ಬುಲೆಟ್ ಶೋರೂಮ್ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮುಂದಿನ ಚಕ್ರವನ್ನು ಮೇಲೆಕ್ಕೆತ್ತಿ ವೀಲಿಂಗ್ ಮಾಡಿರುವ ಆರೋಪದಡಿ ಸವಾರನ ವಿರುದ್ಧ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CLICK HERE SHOP NOW

ಆರೋಪಿ ನಿರೀಕ್ಷಿತ್ ಎಂಬಾತ ಡಿ.10ರಂದು ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದ ಮುಂದಿನ ಚಕ್ರವನ್ನು ಮೇಲೆಕ್ಕೆತ್ತಿ ವೀಲಿಂಗ್ ಮಾಡಿ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಚಾಲನೆ ಮಾಡಿರುವುದಾಗಿ ದೂರಲಾಗಿದೆ.



ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆ ಸರಿಪಡಿಸುವಂತೆ ಕರವೇ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

 


ಉಡುಪಿ : ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ ಅವರಿಗೆ ಮನವಿಯನ್ನು ನೀಡಲಾಯಿತು.

CLICK HERE SHOP NOW

ಉಡುಪಿ ಕೆ.ಎಸ್. ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆ.. ಎ ಟಿ ಎಂ ಸೌಲಭ್ಯ ಇಲ್ಲ, ಮಹಿಳೆ ಹಾಗೂ ಪುರುಷರಿಗೆ ಶೌಚಾಲಯಕ್ಕೆ ಹೋಗಲು ರೂ 10/--ತೆಗೆದುಕೊಳ್ಳುತ್ತಾರೆ. ಬಸ್ ನಿಲ್ದಾಣದಲ್ಲಿ ಕೆಲಸ ಮಾಡಲು ಕೇವಲ ಮೂರು ಮಹಿಳೆಯರನ್ನುಇಟ್ಟಿದ್ದಾರೆ. ಪುರುಷರ ಅಗತ್ಯವಿದೆ. ಶುಚಿತ್ವ ಇಲ್ಲದೆ ದುರ್ವಾಸನೆ ಬಂದು ಸಾರ್ವಜನಿಕರಿಗೆ ತೊಂದರೆ ಆಗುತ್ತದೆ.ಬಸ್ ನಿಲ್ದಾಣದಲ್ಲಿ ಏಜೆಂಟರ ಕಾಟ ನಡೆಯುತ್ತಿದೆ.ತುಂಬಾ ಜನ ಫ್ರೀ ಬಸ್ ಎಂದು ಬರುತ್ತಾರೆ.ಅವರ ಬಳಿ ಹಣ ಇರುವುದಿಲ್ಲ.

 ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರು ಹಾಗೂ ಜಿಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯ ರೊಂದಿಗೆ ಉಡುಪಿ ಜಿಲ್ಲಾಧಿಕಾರಿಯಾದ ಕೆ.ವಿದ್ಯಾ ಕುಮಾರಿ ಅವರಿಗೆ ಮನವಿಯನ್ನು ನೀಡಿದರು.

 ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ಪಾಂಗಾಳ, ಮಹಿಳಾ ಉಪಾಧ್ಯಕ್ಷರಾದ ದೇವಕಿ , ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ಸ್ಟಾನಿ ಡಿಸೋಜ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್, ಜಿಲ್ಲಾ ಸಂಸ್ಕೃತಿಕ ಕಾರ್ಯದರ್ಶಿ ಕೃಷ್ಣಕುಮಾರ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಮಹಿಳಾ ಜಾಲತಾಣ ಸಂಚಾಲಕಿ ರಶ್ಮಿ, ಜಿಲ್ಲಾ ಸದಸ್ಯರಾದ ಅಶೋಕ್, ಮಲ್ಲು, ಉಪಸ್ಥಿತರಿದ್ದರು.

© all rights reserved
made with by templateszoo